ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಬೆಳಗಿನ ಜಾವ ಬಸ್ ಹತ್ತುವಾಗ ಮಹಿಳೆಯ ವ್ಯಾನಿಟಿ ಬ್ಯಾಗ್ನಿಂದ ಬಂಗಾರದ ನೆಕ್ಲೇಸ್ (necklace) ಇದ್ದ ಬಾಕ್ಸ್ ಕಳ್ಳತನ ಮಾಡಲಾಗಿದೆ. ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಕೃತ್ಯ ನಡೆದಿದೆ.
ಭದ್ರಾವತಿಯ ಮುಕ್ತ ಎಂಬುವವರಿಗೆ ಸೇರಿದ ನೆಕ್ಲೇಸ್ ಕಳುವಾಗಿದೆ. ಕುಟುಂಬ ಸಹಿತ ಹುಬ್ಬಳ್ಳಿಗೆ ತೆರಳಲು ಬೆಳಗಿನ ಜಾವ 5 ಗಂಟೆಗೆ ಕೆಎಸ್ಆರ್ಟಿಸಿ ನಿಲ್ದಾಣದಲ್ಲಿ ಬಸ್ ಹತ್ತಿದ್ದರು. ಬಸ್ಸು ಶಿವಮೊಗ್ಗದ ಹೊನ್ನಾಳಿ ರಸ್ತೆಯ ಮೇಲ್ಸೇತುವೆ ಬಳಿ ತೆರಳುವಾಗ, ಮುಕ್ತ ಅವರು ಮಕ್ಕಳಿಗೆ ಕರೆ ಮಾಡಲು ವ್ಯಾನಿಟಿ ಬ್ಯಾಗ್ನಲ್ಲಿದ್ದ ಮೊಬೈಲ್ಗೆ ತೆಗೆಯಲು ಮುಂದಾದರು. ಆಗ ಜಿಪ್ ತೆರೆದಿರುವುದು ಗಮನಕ್ಕೆ ಬಂತು.
ಬ್ಯಾಗ್ನ ಒಳಗೆ ಇಟ್ಟಿದ್ದ ಬಂಗಾರದ ನೆಕ್ಲೇಸ್ ಇದ್ದ ಬಾಕ್ಸ್ ಕಳ್ಳತನವಾಗಿತ್ತು. ಮದುವೆ ಮುಗಿಸಿಕೊಂಡು ಶಿವಮೊಗ್ಗಕ್ಕೆ ಹಿಂತಿರುಗಿದಾಗ ದೂರು ನೀಡಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » UPSC 2024 ಫಲಿತಾಂಶ: 1000ಕ್ಕಿಂತ ಹೆಚ್ಚು ಅಭ್ಯರ್ಥಿಗಳು ಆಯ್ಕೆ, ಕರ್ನಾಟಕದ ವಿದ್ಯಾರ್ಥಿಗಳ ಭರ್ಜರಿ ಸಾಧನೆ

LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






