ಶಿವಮೊಗ್ಗ ಲೈವ್.ಕಾಂ |SHIMOGA NEWS | 7 NOVEMBER 2020
ಮೆಗ್ಗಾನ್ ಆಸ್ಪತ್ರೆಯಲ್ಲಿ ನವಜಾತ ಗಂಡು ಶಿಶುಗಳು ಅದಲು ಬದಲಾದ ಪ್ರಕರಣ ಬೆಳಕಿಗೆ ಬಂದಿದೆ. ಅನಾರೋಗ್ಯದಿಂದ ಅಸುನೀಗಿದ್ದ ಮಗುವನ್ನು ಬೇರೆ ಪೋಷಕರಿಗೆ ಹಸ್ತಾಂತರಿಸಿ ಮೆಗ್ಗಾನ್ ಆಸ್ಪತ್ರೆ ಸಿಬ್ಬಂದಿ ಎಡವಟ್ಟು ಮಾಡಿಕೊಂಡಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಪೊಲೀಸ್ ಕಾನ್ಸ್‍ಟೇಬಲ್ ಮಗು
ಉತ್ತರ ಕರ್ನಾಟಕದ ಪೊಲೀಸ್ ಸಿಬ್ಬಂದಿಯೊಬ್ಬರು ಸಾಗರದ ಯುವತಿಯನ್ನು ಮದುವೆಯಾಗಿದ್ದರು. ಐದು ದಿನದ ಹಿಂದೆ ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದರು. ಮಗುವಿನ ಆರೋಗ್ಯದಲ್ಲಿ ಸಮಸ್ಯೆ ಉಂಟಾಗಿದ್ದರಿಂದ ಮೆಗ್ಗಾನ್ ಆಸ್ಪತ್ರೆಯ ಐಸಿಯುವನಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.
ಸಾಸ್ವೆಹಳ್ಳಿ ಬಳಿಯ ಹಳ್ಳಿಯೊಂದರ ದಂಪತಿ
ಅದೇ ರೀತಿ ಹೊನ್ನಾಳಿ ತಾಲೂಕು ಸಾಸ್ವೆಹಳ್ಳಿ ಸಮೀಪದ ಹಳ್ಳಿಯೊಂದರ ಮಹಿಳೆಗೆ ಗಂಡು ಮಗು ಜನಿಸಿತ್ತು. ಆದರೆ ಮಗುವಿಗೆ ಆರೋಗ್ಯ ಸಮಸ್ಯೆ ಉಂಟಾಯಿತು. ತೂಕವು ಕಡಿಮೆಯಿದ್ದಿದ್ದರಿಂದ ಚಿಕಿತ್ಸೆ ಫಲಕಾರಿ ಆಗದೆ ಮಗು ಮೃತಪಟ್ಟಿತ್ತು.
ಅದಲು ಬದಲಾಗಲು ಕಾರಣ ತಾಯಿ ಹೆಸರು..!
ಆಸ್ಪತ್ರೆಗೆ ದಾಖಲಾಗಿದ್ದ ಎರಡು ಮಗುವಿನ ತಾಯಂದಿರ ಹೆಸರು ಒಂದೆ ಆಗಿತ್ತು. ಇದು ಗೊಂದಲಕ್ಕೆ ಕಾರಣ ಎಂದು ಆಸ್ಪತ್ರೆ ಸಿಬ್ಬಂದಿಗಳ ಸಬೂಬು. ಮಗು ಮೃತಪಡುತ್ತಿದ್ದಂತೆ ವಾರ್ಡ್‍ನ ಹೊರಗೆ ಬಂದ ಸಿಬ್ಬಂದಿ, ತಾಯಿಯ ಹೆಸರು ಕರೆದಿದ್ದಾರೆ. ಆಗ ಅಲ್ಲಿದ್ದ ಪೊಲೀಸ್ ಕಾನ್ಸ್‍ಟೇಬಲ್ ಪತ್ನಿ ಹೋಗಿದ್ದಾರೆ. ಮಗು ಅಸುನೀಗಿದೆ ಎಂದು ಸಿಬ್ಬಂದಿ ತಿಳಿಸಿದ್ದಾರೆ.
ಅಂತ್ಯಕ್ರಿಯೆ ಮುಗಿದು ಹೋಗಿತ್ತು
ಸಾಗರದಲ್ಲಿ ಮಗುವಿನ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು. ಮನೆಗೆ ಹಿಂತಿರುಗುವ ವೇಳೆಗೆ ಮೆಗ್ಗಾನ್ ಆಸ್ಪತ್ರೆಯಿಂದ ಕರೆ ಮಾಡಿದ ಮೆಗ್ಗಾನ್ ಆಸ್ಪತ್ರೆ ಸಿಬ್ಬಂದಿಗಳು, ತಮ್ಮ ಮಗು ಬದುಕಿದೆ. ಮೃತ ಮಗು ತಮ್ಮದಲ್ಲ. ಆಂಬುಲೆನ್ಸ್ ಕಳುಹಿಸಲಾಗುತ್ತದೆ, ಮಗುವಿನ ಮೃತದೇಹವನ್ನು ವಾಪಸ್ ತನ್ನಿ ಎಂದಿದ್ದಾರೆ. ಅಂತ್ಯಕ್ರಿಯೆ ನಡೆಸಲಾಗಿದೆ ಎಂದು ತಿಳಿಸಿದ ಪೋಷಕರು, ಕೂಡಲೆ ಮೆಗ್ಗಾನ್ ಆಸ್ಪತ್ರೆಗೆ ಹಿಂತಿರುಗಿದ್ದಾರೆ. ಇದರಿಂದ ಮೆಗ್ಗಾನ್ ಆಸ್ಪತ್ರೆ ಸಿಬ್ಬಂದಿ ಗೊಂದಲಕ್ಕೀಡಾಗಿದ್ದಾರೆ.
ದೊಡ್ಡಪೇಟೆ ಠಾಣೆ ಮೆಟ್ಟಿಲು ಹತ್ತಿದ ಕೇಸ್
ಇತ್ತ ವಿಚಾರ ತಿಳಿಯುತ್ತಿದ್ದಂತೆ ಮೃತ ಮಗುವಿನ ಸಿಬ್ಬಂದಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆ ಬಳಿ ಗಲಾಟೆ ಮಾಡಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಲು ಮುಂದಾಗಿದ್ದರು. ಈ ವೇಳೆ ಮಧ್ಯ ಪ್ರವೇಶಿಸಿದ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಶ್ರೀಧರ್, ಮೃತ ಶಿಶುವಿನ ಕಡೆಯವರನ್ನು ಸಮಾಧಾನಪಡಿಸಿ ಕಳುಹಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]