BREAKING | ಶಿವಮೊಗ್ಗ ಸೇರಿದಂತೆ ದಕ್ಷಿಣ ಭಾರತದ 20 ಕಡೆ ಎನ್ಐಎ ಅಧಿಕಾರಿಗಳಿಂದ ಏಕಕಾಲಕ್ಕೆ ಪರಿಶೀಲನೆ, ಕಾರಣವೇನು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಅಕ್ಟೋಬರ್ 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ ಸೇರಿದಂತೆ ದಕ್ಷಿಣ ಭಾರತದ ಮೂರು ರಾಜ್ಯಗಳ 20ಕ್ಕೂ ಹೆಚ್ಚು ಕಡೆ ಇವತ್ತು ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಶೃಂಗೇರಿ, ಕಾರ್ಕಳಕ್ಕೆ ಹೊಂದಿಕೊಂಡಂತೆ ಇರುವ ಶಿವಮೊಗ್ಗದ ಕೆಲವು ಕಡೆ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ. ನಕ್ಸಲ್ ಚಳವಳಿ ಸಂಬಂಧ ತನಿಖೆ ಹಿನ್ನೆಲೆಯಲ್ಲಿ ಈ ಪರಿಶೀಲನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ರಾಜ್ಯದ ಮೂರು ಜಿಲ್ಲೆಗಳಲ್ಲಿ ಪರಿಶೀಲನೆ

ಕೇರಳ, ತಮಿಳುನಾಡು ಮತ್ತು ಕರ್ನಾಟಕದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಶಿವಮೊಗ, ಚಿಕ್ಕಮಗಳೂರು, ಉಡುಪಿ ಐದು ಕಡೆಯಲ್ಲಿ ಪರಿಶೀಲನೆ ನಡೆಸಿದ್ದಾರೆ ಎಂದು ಶಿವಮೊಗ್ಗ ಲೈವ್.ಕಾಂಗೆ ಮೂಲಗಳು ತಿಳಿಸಿವೆ.

ADVT JULY NANJAPPA HOSPITAL HOME LAB TESTING

ಸೈಲೆಂಟ್ ದಾಳಿ, ಪರಿಶೀಲನೆ

ಎನ್ಐಎ ಅಧಿಕಾರಿಗಳು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡದೆ ದಾಳಿ ಮಾಡಿದ್ದಾರೆ. ತಮಿಳುನಾಡಿನ ಕೊಯಮತ್ತೂರು, ಥೇಣಿ, ರಾಮನಾಥಪುರಂ, ಸೇಲಂ, ಕನ್ಯಾಕುಮಾರಿ, ಕೃಷ್ಣಗಿರಿ ಜಿಲ್ಲೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಇನ್ನು, ಕೇರಳದ ವಯನಾಡ್, ತ್ರಿಶೂರ್ ಮತ್ತು ಕಣ್ಣೂರು ಜಿಲ್ಲೆಗಳಲ್ಲೂ ಪರಿಶೀಲಿಸಿದ್ದಾರೆ.

ಏನಿದು ಪ್ರಕರಣ? ಪರಿಶೀಲನೆಗೇನು ಕಾರಣ?

ನಕ್ಸಲ್ (ಸಿಪಿಐ ಮಾವೋವಾದಿ) ಚಳವಳಿಗೆ ಶಕ್ತಿ ತುಂಬಲು 2016ರ ಸೆಪ್ಟೆಂಬರ್ ಕೊನೆಯ ವಾರದಲ್ಲಿ ತರಬೇತಿ ಕ್ಯಾಂಪ್ ನಡೆಸಲು ನಿರ್ಧರಿಸಲಾಗಿತ್ತು. ಕೇರಳ ರಾಜ್ಯದ ಮಲ್ಲಾಪುರಂ ಜಿಲ್ಲೆಯ ಎಡಕ್ಕರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ತರಬೇತಿ ಶಿಬಿರ ಸ್ಥಳ ಗುರುತಿಸಲಾಗಿತ್ತು.  ಶಿಬಿರದಲ್ಲಿ ಧ್ವಜಾರೋಹಣ ನೆರವೇರಿಸಿ, ಶಸ್ತ್ರಾಸ್ತ್ರ ಬಳಕೆಯ ತರಬೇತಿ ನೀಡಲು ಚಿಂತಿಸಲಾಗಿತ್ತು. ಈ ಸಂಬಂಧ 2017ರಲ್ಲಿ ಕೇರಳದ ಎಡಕ್ಕರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಐವರನ್ನು ಬಂಧಿಸಲಾಗಿತ್ತು.

1632381453891714 0

ಮರು ಎಫ್ಐಆರ್ ದಾಖಲಿಸಿದ ಎನ್ಐಎ

ಪ್ರಕರಣದ ತನಿಖೆಯನ್ನು ವಹಿಸಿಕೊಂಡ ಎನ್ಐಎ ಅಧಿಕಾರಿಗಳು ಮರು ಎಫ್ಐಆರ್ ದಾಖಲು ಮಾಡಿಕೊಂಡರು. ಪ್ರಕರಣದಲ್ಲಿ ಇನ್ನೂ 20 ಮಂದಿ ಇರುವುದು ಬೆಳಕಿಗೆ ಬಂದಿತ್ತು. ಕರ್ನಾಟಕ ನಕ್ಸಲ್ ಚಳವಳಿಯ ಮುಂಚೂಣಿ ನಾಯಕರಾದ ಬಿ.ಜಿ.ಕೃಷ್ಣಮೂರ್ತಿ, ವಿಕ್ರಂ ಗೌಡ ಅವರ ಹೆಸರುಗಳು ಈ ಪಟ್ಟಿಯಲ್ಲಿತ್ತು. ಹಾಗಾಗಿ ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಜಿಲ್ಲೆಯಲ್ಲಿ ಪರಿಶೀಲನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿದ್ದ ಎನ್ಐಎ ಅಧಿಕಾರಿಗಳು ತೀರ್ಥಹಳ್ಳಿ, ಹೊಸನಗರದ ಕೆಲವು ಕಡೆ ಭೇಟಿ ನೀಡಿದ್ದರು ಎಂದು ಮೂಲಗಳು ತಿಳಿಸಿವೆ.

AVvXsEi8Ac5ZsMIgS4Jz30esQXnANsyqm9IIwg nufI lektr jUlKUuz2As55HIMKzaVCSA mvi3ziJYrT6bh95Gghl41xeUHT4DKu4p30aRUJoWqJ283zKAkt4M4 uZKs5Mhybj YH8TOh0wmuu1WMMkIOKf4JU7gM IC2 ZFBa4 KlGL6c0GU9JI9z46Bw=s1466

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment