ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಅಕ್ಟೋಬರ್ 2021
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿವಮೊಗ್ಗ ಸೇರಿದಂತೆ ದಕ್ಷಿಣ ಭಾರತದ ಮೂರು ರಾಜ್ಯಗಳ 20ಕ್ಕೂ ಹೆಚ್ಚು ಕಡೆ ಇವತ್ತು ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಶೃಂಗೇರಿ, ಕಾರ್ಕಳಕ್ಕೆ ಹೊಂದಿಕೊಂಡಂತೆ ಇರುವ ಶಿವಮೊಗ್ಗದ ಕೆಲವು ಕಡೆ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ. ನಕ್ಸಲ್ ಚಳವಳಿ ಸಂಬಂಧ ತನಿಖೆ ಹಿನ್ನೆಲೆಯಲ್ಲಿ ಈ ಪರಿಶೀಲನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ರಾಜ್ಯದ ಮೂರು ಜಿಲ್ಲೆಗಳಲ್ಲಿ ಪರಿಶೀಲನೆ
ಕೇರಳ, ತಮಿಳುನಾಡು ಮತ್ತು ಕರ್ನಾಟಕದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಶಿವಮೊಗ, ಚಿಕ್ಕಮಗಳೂರು, ಉಡುಪಿ ಐದು ಕಡೆಯಲ್ಲಿ ಪರಿಶೀಲನೆ ನಡೆಸಿದ್ದಾರೆ ಎಂದು ಶಿವಮೊಗ್ಗ ಲೈವ್.ಕಾಂಗೆ ಮೂಲಗಳು ತಿಳಿಸಿವೆ.
ಸೈಲೆಂಟ್ ದಾಳಿ, ಪರಿಶೀಲನೆ
ಎನ್ಐಎ ಅಧಿಕಾರಿಗಳು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡದೆ ದಾಳಿ ಮಾಡಿದ್ದಾರೆ. ತಮಿಳುನಾಡಿನ ಕೊಯಮತ್ತೂರು, ಥೇಣಿ, ರಾಮನಾಥಪುರಂ, ಸೇಲಂ, ಕನ್ಯಾಕುಮಾರಿ, ಕೃಷ್ಣಗಿರಿ ಜಿಲ್ಲೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಇನ್ನು, ಕೇರಳದ ವಯನಾಡ್, ತ್ರಿಶೂರ್ ಮತ್ತು ಕಣ್ಣೂರು ಜಿಲ್ಲೆಗಳಲ್ಲೂ ಪರಿಶೀಲಿಸಿದ್ದಾರೆ.
ಏನಿದು ಪ್ರಕರಣ? ಪರಿಶೀಲನೆಗೇನು ಕಾರಣ?
ನಕ್ಸಲ್ (ಸಿಪಿಐ ಮಾವೋವಾದಿ) ಚಳವಳಿಗೆ ಶಕ್ತಿ ತುಂಬಲು 2016ರ ಸೆಪ್ಟೆಂಬರ್ ಕೊನೆಯ ವಾರದಲ್ಲಿ ತರಬೇತಿ ಕ್ಯಾಂಪ್ ನಡೆಸಲು ನಿರ್ಧರಿಸಲಾಗಿತ್ತು. ಕೇರಳ ರಾಜ್ಯದ ಮಲ್ಲಾಪುರಂ ಜಿಲ್ಲೆಯ ಎಡಕ್ಕರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ತರಬೇತಿ ಶಿಬಿರ ಸ್ಥಳ ಗುರುತಿಸಲಾಗಿತ್ತು. ಶಿಬಿರದಲ್ಲಿ ಧ್ವಜಾರೋಹಣ ನೆರವೇರಿಸಿ, ಶಸ್ತ್ರಾಸ್ತ್ರ ಬಳಕೆಯ ತರಬೇತಿ ನೀಡಲು ಚಿಂತಿಸಲಾಗಿತ್ತು. ಈ ಸಂಬಂಧ 2017ರಲ್ಲಿ ಕೇರಳದ ಎಡಕ್ಕರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಐವರನ್ನು ಬಂಧಿಸಲಾಗಿತ್ತು.
ಮರು ಎಫ್ಐಆರ್ ದಾಖಲಿಸಿದ ಎನ್ಐಎ
ಪ್ರಕರಣದ ತನಿಖೆಯನ್ನು ವಹಿಸಿಕೊಂಡ ಎನ್ಐಎ ಅಧಿಕಾರಿಗಳು ಮರು ಎಫ್ಐಆರ್ ದಾಖಲು ಮಾಡಿಕೊಂಡರು. ಪ್ರಕರಣದಲ್ಲಿ ಇನ್ನೂ 20 ಮಂದಿ ಇರುವುದು ಬೆಳಕಿಗೆ ಬಂದಿತ್ತು. ಕರ್ನಾಟಕ ನಕ್ಸಲ್ ಚಳವಳಿಯ ಮುಂಚೂಣಿ ನಾಯಕರಾದ ಬಿ.ಜಿ.ಕೃಷ್ಣಮೂರ್ತಿ, ವಿಕ್ರಂ ಗೌಡ ಅವರ ಹೆಸರುಗಳು ಈ ಪಟ್ಟಿಯಲ್ಲಿತ್ತು. ಹಾಗಾಗಿ ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಜಿಲ್ಲೆಯಲ್ಲಿ ಪರಿಶೀಲನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿದ್ದ ಎನ್ಐಎ ಅಧಿಕಾರಿಗಳು ತೀರ್ಥಹಳ್ಳಿ, ಹೊಸನಗರದ ಕೆಲವು ಕಡೆ ಭೇಟಿ ನೀಡಿದ್ದರು ಎಂದು ಮೂಲಗಳು ತಿಳಿಸಿವೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200