ಶಿವಮೊಗ್ಗದ ಸರ್ಕಾರಿ ಅಧಿಕಾರಿಗೆ 32 ಲಕ್ಷ ರೂ. ವಂಚನೆ, ಆಗಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 8 MARCH 2024

SHIMOGA : ಆನ್‌ಲೈನ್‌ ಟ್ರೇಡಿಂಗ್‌ನಲ್ಲಿ ಷೇರುಗಳನ್ನು ಖರೀದಿಸಿ ಹೋಲ್ಡ್‌ ಮಾಡಿದರೆ ಅಧಿಕ ಲಾಭಾಂಶ ದೊರೆಯಲಿದೆ ಎಂದು ನಂಬಿಸಿ ಅಧಿಕಾರಿಯೊಬ್ಬರಿಗೆ 32.45 ಲಕ್ಷ ರೂ. ವಂಚಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ (ಹೆಸರು ಗೌಪ್ಯ) ಇನ್‌ಸ್ಟಾಗ್ರಾಂನಲ್ಲಿ ಟ್ರೇಡಿಂಗ್‌ನ ಲಿಂಕ್‌ ಕ್ಲಿಕ್‌ ಮಾಡಿದಾಗ ವಾಟ್ಸಪ್‌ ಗ್ರೂಪ್‌ ಒಂದಕ್ಕೆ ಸೇರಿದ್ದರು. ಅಲ್ಲಿ ನಿಮಿಷ ಗುಪ್ತಾ ಎಂಬ ಹೆಸರಿನಲ್ಲಿ ಚಾಟಿಂಗ್‌ ಮಾಡಿದ್ದು, ಮೊಬೈಲ್‌ನಲ್ಲಿ ಆಪ್‌ ಡೌನ್‌ಲೋಡ್‌ ಮಾಡುವಂತೆ ಸೂಚಿಸಲಾಗಿತ್ತು. ಅಲ್ಲದೆ, ಆ ಆಪ್‌ಗೆ ಹಣ ಹೂಡಿಕೆ ಮಾಡಬೇಕು. ಹೆಚ್ಚು ಲಾಭಾಂಶ ಬರಲಿದ್ದು, ಶೇ.20ರಷ್ಟು ಕಮಿಷನ್‌ ನೀಡಬೇಕು ಎಂದು ತಿಳಿಸಲಾಗಿತ್ತು. ಅದರಂತೆ ಅಧಿಕಾರಿ ಹೂಡಿಕೆ ಮಾಡಿದ್ದರು. ಕೊನೆಗೆ ವಂಚನೆಗೊಳಗಾಗಿದ್ದು ಅರಿವಾಗಿದ್ದು ಶಿವಮೊಗ್ಗದ ಸಿಇಎನ್‌ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

ಇದನ್ನೂ ಓದಿ – ಅಬ್ಬಲಗೆರೆಯ ಬಾರ್‌ನ ಬಾಗಿಲು ತೆಗೆಯಲು ಬಂದ ಕ್ಯಾಶಿಯರ್‌ಗೆ ಬೆಳಗ್ಗೆ ಕಾದಿತ್ತು ಶಾಕ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 8, 2024

Leave a Comment