ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಯಿಸಿಕೊಡಲು ಲಂಚಕ್ಕೆ ಬೇಡಿಕೆಯಿಟ್ಟು ಹಣ ಪಡೆಯುತ್ತಿದ್ದ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಂದಿನ ಜಿಲ್ಲಾ ವ್ಯವಸ್ಥಾಪಕರಿಗೆ (officer) ಇಲ್ಲಿನ ವಿಶೇಷ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.
ಇದನ್ನೂ ಓದಿ : ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ
ಸಾಗರ ತಾಲೂಕಿನ ಹೊಸಗುಂದ ಗ್ರಾಮದ ಹೆಚ್.ಎಸ್. ಜನಾರ್ಧನ ಎಂಬುವವರು ತಮ್ಮ ಜಮೀನಿನಲ್ಲಿ ಕೊಳವೆ ಬಾವಿ ಕೊರೆಯಿಸಲು ಅರ್ಜಿ ಸಲ್ಲಿಸಿದ್ದರು. ಈ ಕೆಲಸ ಮಾಡಿಕೊಡಲು ಜಿಲ್ಲಾ ವ್ಯವಸ್ಥಾಪಕ ಆರ್.ಎಸ್. ಪರಮೇಶ್ವರಪ್ಪ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಬಗ್ಗೆ ಜನಾರ್ಧನ ಅವರು ಭ್ರಷ್ಟಾಚಾರ ನಿಗ್ರಹ ದಳಕ್ಕೆ (ACB) ದೂರು ನೀಡಿದ್ದರು. 2017ರ ಜುಲೈ 13ರಂದು ಕಚೇರಿಯಲ್ಲಿ ₹10,000 ಹಣ ಪಡೆಯುತ್ತಿದ್ದಾಗ ಅಧಿಕಾರಿ ಬಲೆಗೆ ಬಿದ್ದಿದ್ದರು.

ತನಿಖೆ ನಡೆಸಿದ ಎ.ಸಿ.ಬಿ ಪೊಲೀಸ್ ಉಪಾಧೀಕ್ಷಕ ಎ.ಚಂದ್ರಪ್ಪ ಅವರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಶಿವಮೊಗ್ಗದ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಲಯದ ನ್ಯಾ. ಅಭಯ್ ಧನಪಾಲ್ ಚೌಗಲ ಅವರು ಈ ಪ್ರಕರಣದ ವಿಚಾರಣೆ ನಡೆಸಿದರು. ಆರೋಪ ಸಾಬೀತಾದ ಹಿನ್ನೆಲೆ ಆರ್.ಎಸ್. ಪರಮೇಶ್ವರಪ್ಪ ಅವರಿಗೆ 2 ವರ್ಷ ಸಜೆ ಹಾಗೂ ₹40,000 ದಂಡ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸಾರ್ವಜನಿಕ ಅಭಿಯೋಜಕ ಎಂ.ಡಿ.ಸುಂದರ್ ರಾಜ್ ವಾದ ಮಂಡಿಸಿದ್ದರು.
ಇದನ್ನೂ ಓದಿ : ಹೊಟೇಲ್ ಮಾಲೀಕನಿಂದ ಕೊಲೆ, ಕಾರಿನಲ್ಲಿ ಮೃತದೇಹ ಸಾಗಿಸುವಾಗ ಪೊಲೀಸ್ ಬಲೆಗೆ

LATEST NEWS
- ಶಿವಮೊಗ್ಗದಲ್ಲಿ ಶೆಟ್ಟರ ಸಂತೆ, ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್, ಏನೇನೆಲ್ಲ ಸ್ಟಾಲ್ಗಳಿವೆ?

- ಸರ್ಕಾರಿ ಅಧಿಕಾರಿಗೆ ಜೈಲು ಶಿಕ್ಷೆ, ಏನಿದು ಪ್ರಕರಣ?

- ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್? – ಇಂದಿನ ಅಡಿಕೆ ಧಾರಣೆ

- ಹೊಟೇಲ್ ಮಾಲೀಕನಿಂದ ಕೊಲೆ, ಕಾರಿನಲ್ಲಿ ಮೃತದೇಹ ಸಾಗಿಸುವಾಗ ಪೊಲೀಸ್ ಬಲೆಗೆ

- Acting Registrar Appointed for Kuvempu University

About The Editor
ನಿತಿನ್ ಆರ್.ಕೈದೊಟ್ಲು














