ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಮಂಡ್ಲಿ ಗ್ರಾಮದ ಖಾಲಿ ನಿವೇಶನದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಸುಮಾರು 300 ಮೆಟ್ರಿಕ್ ಟನ್ ಮರಳನ್ನು (Sand) ಅಧಿಕಾರಿಗಳು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಸರ್ಕಾರದ ಬೊಕ್ಕಸಕ್ಕೆ ರಾಜಧನ ವಂಚಿಸುವ ಉದ್ದೇಶದಿಂದ ಈ ಮರಳನ್ನು ಕಳ್ಳತನ ಮಾಡಿ ಸಂಗ್ರಹಿಸಿಡಲಾಗಿತ್ತು ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ – ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?
ಅಕ್ರಮವಾಗಿ ಮರಳು ಸಂಗ್ರಹಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆ ಉಪವಿಭಾಗಾಧಿಕಾರಿಯ ನಿರ್ದೇಶನದ ಮೇರೆಗೆ ಕಂದಾಯ ಇಲಾಖೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ದೊಡ್ಡಪೇಟೆ ಪೊಲೀಸ್ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿದರು. ಈ ಸಂದರ್ಭ ಪರವಾನಗಿ ಇಲ್ಲದೆ ದಾಸ್ತಾನು ಮಾಡಲಾಗಿದ್ದ ಮರಳು ಪತ್ತೆಯಾಗಿದೆ.

300 ಮೆಟ್ರಿಕ್ ಟನ್ ಮರಳು ವಶಕ್ಕೆ ಪಡೆಯಲಾಗಿದೆ. ಇದರ ಮೌಲ್ಯ ₹25,55,000 ಎಂದು ಅಂದಾಜಿಸಲಾಗಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಭೂವಿಜ್ಞಾನಿ ಪ್ರಿಯಾ ದೊಡ್ಡಗೌಡ ಅವರು ನೀಡಿದ ದೂರಿನ ಮೇರೆಗೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LATEST NEWS
- ಗಾಂಧಿ ಬಜಾರ್ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್, ಏನಿದು ಕೇಸ್?

- ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

- ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್

- ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

- ರಾತ್ರಿ 11:45ಕ್ಕೆ ಅಮೀರ್ ಅಹಮದ್ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು














