ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 7 FEBRUARY 2025
ಶಿವಮೊಗ್ಗ : ನಗರದ ಸಾರಿಗೆ ಇಲಾಖೆ (RTO) ಕಚೇರಿಯಲ್ಲಿ ಇಬ್ಬರು ಅಧಿಕಾರಿಗಳು ಕೈ ಕೈ ಮಿಲಾಯಿಸಿದ್ದಾರೆ. ಶೂ ಕೈಯಲ್ಲಿ ಹಿಡಿದು ಗಲಾಟೆ ಮಾಡಿಕೊಂಡಿದ್ದಾರೆ. ನೂಕಾಟದ ವೇಳೆ ಕಂಪ್ಯೂಟರ್ ಒಂದಕ್ಕೆ ಹಾನಿಯಾಗಿದೆ ಎಂದು ಆರೋಪಿಸಲಾಗಿದೆ.
ಕೆಲಸದ ವಿಚಾರವಾಗಿ ಇಬ್ಬರು ಅಧಿಕಾರಿಗಳ (ಕಾರಣಾಂತರದಿಂದ ಹೆಸರು ಗೌಪ್ಯ) ಮಧ್ಯೆ ಜಗಳವಾಗಿದೆ ಎಂದು ಆರೋಪಿಸಲಾಗಿದೆ. ಒಬ್ಬ ಅಧಿಕಾರಿ ಶೂ ಕೈಯಲ್ಲಿ ಹಿಡಿದುಕೊಂಡು ಹೊಡೆಯುವುದಾಗಿ ಬೆದರಿಸಿದ್ದಾರೆ ಎನ್ನಲಾಗಿದೆ. ಗಲಾಟೆಯಾಗುತ್ತಿದ್ದಂತೆ ಇಬ್ಬರು ಅಧಿಕಾರಿಗಳನ್ನು ಉಳಿದ ಸಿಬ್ಬಂದಿ ಹಿಡಿದುಕೊಂಡಿದ್ದಾರೆ.

ಈ ಮಧ್ಯೆ ಅಧಿಕಾರಿಯೊಬ್ಬರು ಕುರ್ಚಿಯನ್ನು ಎತ್ತಿ ಬಿಸಾಡಿದ್ದರಿಂದ ಕಂಪ್ಯೂಟರ್ಗೆ ಹಾನಿಯಾಗಿದೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಮಂಗಳದ ಪಾರಂಪರಿಕ ನಾಟಿ ವೈದ್ಯ ಶಿವಣ್ಣಗೌಡ ನಿಧನ, ಇಲ್ಲಿದೆ ಅವರ ಕುರಿತ 4 ಪ್ರಮುಖಾಂಶ
LATEST NEWS
- ದುರಸ್ತಿ ವೇಳೆ ಲೈನ್ ಮ್ಯಾನ್ಗೆ ಕರೆಂಟ್ ಶಾಕ್, ಸ್ಥಳದಲ್ಲೆ ಸಾವು

- ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

- ಉಪನ್ಯಾಸಕ ಸುರೇಶ್ ನಿಗೂಢ ಸಾವು ಕೇಸ್, ಶಿವಮೊಗ್ಗ SP ಫಸ್ಟ್ ರಿಯಾಕ್ಷನ್, ಏನಂದ್ರು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

- ಟಾಟಾ ಏಸ್, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

About The Editor
ನಿತಿನ್ ಆರ್.ಕೈದೊಟ್ಲು















