ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜುಲೈ 2021
ಹೊಳೆಹೊನ್ನೂರು ರಸ್ತೆ ಬಳಿ ದ್ವಿಚಕ್ರ ವಾಹನಗಳಲ್ಲಿ ಗಾಂಜಾ ಇರಿಸಿಕೊಂಡು ಮಾರಾಟ ಮಾಡುತ್ತಿದ್ದ ಯುವಕರ ತಂಡದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಹಳೆ ನಗರ ಠಾಣೆ ವ್ಯಾಪ್ತಿಯ ಹಳೆಸೀಗೆಬಾಗಿ ಬಳಿ ದಾಳಿ ನಡೆಸಿದ ಪೊಲೀಸರು ಭದ್ರಾವತಿ ಹೊಸಮನೆಯ ದಕ್ಷಿಣಾ ಮೂರ್ತಿ (37), ಸುದೀಪ್ (30), ವಿಜಯನಗರದ ಡ್ಯಾನಿಯಲ್ (25), ಸಂತೆ ಮೈದಾನದ ಕಿರಣ್ (23), ಜನ್ನಾಪುರದ ಪವನ್ ಕುಮಾರ್ (25), ಹೊಸ ಕೋಡಿಹಳ್ಳಿಯ ನವೀನ್ ಕುಮಾರ್ (26) ಎಂಬುವವರನ್ನು ಬಂಧಿಸಲಾಗಿದೆ.
ಒಂದು ಕೆ.ಜಿ. ಗಾಂಜಾ
ಬಂಧಿತರಿಂದ ಒಂದು ಕೆ.ಜಿ. 375 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಇದರ ಅಂದಾಜು ಮೊತ್ತ 35 ಸಾವಿರ ರೂ. ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಯುವಕರಿಂದ 800 ರೂ. ನಗದು ಮತ್ತು ಎರಡು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.
ಭದ್ರಾವತಿ ನಗರ ಸರ್ಕಲ್ ಇನ್ಸ್‍ಪೆಕ್ಟರ್ ನೇತೃತ್ವದಲ್ಲಿ ತಂಡ ಕಾರ್ಯಾಚರಣೆ ನಡೆಸಿದೆ. ವಿವಿಧ ಕಲಂಗಳಡಿ ಪ್ರಕರಣ ದಾಖಲು ಮಾಡಲಾಗಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200