ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 28 ಡಿಸೆಂಬರ್ 2021
ಶಿವಮೊಗ್ಗದ ಬೈಪಾಸ್ ರಸ್ತೆಯಲ್ಲಿರುವ ಹೊಟೇಲ್ ಒಂದರ ಮುಂದೆ, ಅಮಲಿನಲ್ಲಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಈತ ಗಾಂಜಾ ಸೇವನೆ ಮಾಡಿರುವುದು ಖಚಿತವಾದ ಹಿನ್ನೆಲೆ ಪ್ರಕರಣ ದಾಖಲು ಮಾಡಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಪೊಲೀಸರು ರೌಂಡ್ಸ್’ನಲ್ಲಿರುವ ಸಂದರ್ಭ ಬೈಪಾಸ್ ರಸ್ತೆಯಲ್ಲಿ ಯುವಕನೊಬ್ಬ ಅಮಲಿನಲ್ಲಿರುವಂತೆ ಕಂಡು ಬಂದಿದೆ. ಆತನನ್ನು ವಶಕ್ಕೆ ಪಡೆದು ಮೆಗ್ಗಾನ್ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ.
ಯುವಕನನ್ನು ಬಂಧಿಸಿ, ಪ್ರಕರಣ ದಾಖಲು ಮಾಡಲಾಗಿದೆ. ತನ್ವೀರ್ ಅಲಿಯಾಸ್ ಮಾರ್ಕೆಟ್ ಫೌಜಾನ್ (21) ಬಂಧಿತ. ಈತ ಕ್ಲಾರ್ಕ್ ಪೇಟೆ ನಿವಾಸಿಯಾಗಿದ್ದಾನೆ. ದೊಡ್ಡಪೇಟೆ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.