SHIVAMOGGA LIVE NEWS | 30 NOVEMBER 2022
ಸಾಗರ : ಅಂಗಡಿಯಲ್ಲಿ ಒಂದು ಮೊಬೈಲ್ ಫೋನ್ ಮತ್ತು ಲ್ಯಾಪ್ ಟಾಪ್ ಕಳ್ಳತನವಾದ (mobile laptop theft) ಕೆಲವೇ ಗಂಟೆಯಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆತನಿಂದ ಎಂಟು ಮೊಬೈಲ್ ಫೋನ್, ಲ್ಯಾಪ್ ಟಾಪ್ ವಶಕ್ಕೆ ಪಡೆದಿದ್ದಾರೆ.
ಸಾಗರದ ಜೆ.ಪಿ.ನಗರದ ಎಸ್.ಎಂ.ವಿನಯ್ (24) ಬಂಧಿತ. ಸಾಗರದ ಸೊರಬ ರಸ್ತೆಯಲ್ಲಿರುವ ಮೊಬೈಲ್ ವರ್ಡ್ ಶೋ ರೂಂನಿಂದ ವಿನಯ್, ಒಂದು ಮೊಬೈಲ್ ಮತ್ತು ಲ್ಯಾಪ್ ಟಾಪ್ ಕದ್ದಿದ್ದ. ಈ ಸಂಬಂಧ ಸಾಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
(mobile laptop theft)
ಕೆಲವೆ ಗಂಟೆಯಲ್ಲಿ ಆರೋಪಿ ಬಂಧನ
ಪ್ರಕರಣ ದಾಖಲಾದ ಕೆಲವೇ ಗಂಟೆಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆತನ ಬಳಿ 8 ಮೊಬೈಲ್ ಫೋನ್, ಒಂದು ಲ್ಯಾಪ್ ಟಾಪ್ ಪತ್ತೆಯಾಗಿದೆ. ಅವುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ವಿನಯ್ ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ALSO READ – ನಾಲ್ಕು ತಿಂಗಳ ಹಿಂದೆ ಪ್ರಾಣಪಾಯದಿಂದ ಪಾರಾಗಿದ್ದ ಹೆದ್ದಾರಿಯಲ್ಲೇ ಶಿವಮೊಗ್ಗದ ಮಹಿಳೆ ಸಾವು
ಎಎಸ್ಪಿ ರೋಹನ್ ಜಗದೀಶ್, ಸಾಗರ ಟೌನ್ ಇನ್ಸ್ ಪೆಕ್ಟರ್ ಸೀತಾರಂ ಅವರ ಮಾರ್ಗದರ್ಶನದಲ್ಲಿ ಪಿಎಸ್ಐ ಡಿ.ಟಿ.ಸಾಗರ್ ಕರ್ ಅವರ ನೇತೃತ್ವದಲ್ಲಿ ಸಿಬ್ಬಂದಿ ರತ್ನಾಕರ್, ನಾಗರಾಜ್, ಶ್ರೀಧರ್ ಮತ್ತು ಶಿಲ್ಪಾ ಅವರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಸಾಗರ ಠಾಣೆಯಲ್ಲಿ ತನಿಖೆ ಮುಂದುವರೆದಿದೆ.