ಕದ್ದ ಕೆಲವೇ ಗಂಟೆಯಲ್ಲೇ ಪೊಲೀಸರಿಗೆ ಸಿಕ್ಕಿಬಿದ್ದ ಕಳ್ಳ, 1 ಫೋನ್ ಕದ್ದವನ ಬಳಿ ಸಿಕ್ತು 8 ಫೋನ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 30 NOVEMBER 2022

ಸಾಗರ : ಅಂಗಡಿಯಲ್ಲಿ ಒಂದು ಮೊಬೈಲ್ ಫೋನ್ ಮತ್ತು ಲ್ಯಾಪ್ ಟಾಪ್ ಕಳ್ಳತನವಾದ (mobile laptop theft) ಕೆಲವೇ ಗಂಟೆಯಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆತನಿಂದ ಎಂಟು ಮೊಬೈಲ್ ಫೋನ್, ಲ್ಯಾಪ್ ಟಾಪ್ ವಶಕ್ಕೆ ಪಡೆದಿದ್ದಾರೆ.

Shimoga Nanajappa Hospital

ಸಾಗರದ ಜೆ.ಪಿ.ನಗರದ ಎಸ್.ಎಂ.ವಿನಯ್ (24) ಬಂಧಿತ. ಸಾಗರದ ಸೊರಬ ರಸ್ತೆಯಲ್ಲಿರುವ ಮೊಬೈಲ್ ವರ್ಡ್ ಶೋ ರೂಂನಿಂದ ವಿನಯ್, ಒಂದು ಮೊಬೈಲ್ ಮತ್ತು ಲ್ಯಾಪ್ ಟಾಪ್ ಕದ್ದಿದ್ದ. ಈ ಸಂಬಂಧ ಸಾಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

(mobile laptop theft)

ಕೆಲವೆ ಗಂಟೆಯಲ್ಲಿ ಆರೋಪಿ ಬಂಧನ

https://chat.whatsapp.com/KChu2C1bGTM2v9HmZlfIkSಪ್ರಕರಣ ದಾಖಲಾದ ಕೆಲವೇ ಗಂಟೆಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆತನ ಬಳಿ 8 ಮೊಬೈಲ್ ಫೋನ್, ಒಂದು ಲ್ಯಾಪ್  ಟಾಪ್  ಪತ್ತೆಯಾಗಿದೆ. ಅವುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ವಿನಯ್ ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ALSO READ – ನಾಲ್ಕು ತಿಂಗಳ ಹಿಂದೆ ಪ್ರಾಣಪಾಯದಿಂದ ಪಾರಾಗಿದ್ದ ಹೆದ್ದಾರಿಯಲ್ಲೇ ಶಿವಮೊಗ್ಗದ ಮಹಿಳೆ ಸಾವು

ಎಎಸ್ಪಿ ರೋಹನ್ ಜಗದೀಶ್, ಸಾಗರ ಟೌನ್ ಇನ್ಸ್ ಪೆಕ್ಟರ್ ಸೀತಾರಂ ಅವರ ಮಾರ್ಗದರ್ಶನದಲ್ಲಿ ಪಿಎಸ್ಐ ಡಿ.ಟಿ.ಸಾಗರ್ ಕರ್ ಅವರ ನೇತೃತ್ವದಲ್ಲಿ ಸಿಬ್ಬಂದಿ ರತ್ನಾಕರ್, ನಾಗರಾಜ್, ಶ್ರೀಧರ್ ಮತ್ತು ಶಿಲ್ಪಾ ಅವರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಸಾಗರ ಠಾಣೆಯಲ್ಲಿ ತನಿಖೆ ಮುಂದುವರೆದಿದೆ.

Shimoga nanjappa Hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment