ಶಿವಮೊಗ್ಗ: ನಗರದಲ್ಲಿ ಎಂಡಿಎಂಎ (MDMA) ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಬಂಧಿತನನ್ನು ಶಾಹೀದ್ ಖಾನ್ (40) ಎಂದು ಗುರುತಿಸಲಾಗಿದೆ. ಈತನಿಂದ ₹1,52,000 ಮೌಲ್ಯದ 15.21 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು ಹಾಗೂ ಮಾರಾಟಕ್ಕೆ ಬಳಸಿದ್ದ ₹40,000 ಮೌಲ್ಯದ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

100 ಅಡಿ ರಸ್ತೆಯಿಂದ ಅಣ್ಣನಗರ ಮಾರ್ಗದಲ್ಲಿ ಇರುವ ತುಂಗಾ ಚಾನೆಲ್ ಏರಿಯಾ ರಸ್ತೆ ಬದಿ ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆ ದೊಡ್ಡಪೇಟೆ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಸಿಬ್ಬಂದಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ JNNCE ಕಾಲೇಜಿನಲ್ಲಿ ADMISSION ಶುರು

