ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | CRIME | 03 ಮೇ 2022
ಶಿವಮೊಗ್ಗದ KSRTC ಬಸ್ ನಿಲ್ದಾಣದ ಹಿಂಭಾಗ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆತನ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವುದು ಖಚಿತವಾದ ಹಿನ್ನೆಲೆ ಪ್ರಕರಣ ದಾಖಲು ಮಾಡಲಾಗಿದೆ.
ರಾಗಿಗುಡ್ಡ ನಿವಾಸಿ ಮೊಹಮದ್ ಅವೀಜ್ (19) ಬಂಧಿತ. ಮಟನ್ ಸ್ಟಾಲ್’ನಲ್ಲಿ ಕೆಲಸ ಮಾಡುವ ಈತ ಶಿವಮೊಗ್ಗದ KSRTC ಬಸ್ ನಿಲ್ದಾಣ ಹಿಂಭಾಗ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ. ಗಸ್ತು ತಿರುಗುತ್ತಿದ್ದ ಪೊಲೀಸರು ಇದನ್ನು ಗಮನಿಸಿ ವಶಕ್ಕೆ ಪಡೆದಿದ್ದಾರೆ.
ಮೊಹಮದ್ ಅವೀಜ್’ನನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ದೊಡ್ಡಪೇಟೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಹಲವು ಇನ್ಸ್ ಪೆಕ್ಟರ್’ಗಳ ವರ್ಗಾವಣೆ, ಯಾರೆಲ್ಲ ವರ್ಗವಾಗಿದ್ದಾರೆ?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422