ಶಿವಮೊಗ್ಗ ಲೈವ್.ಕಾಂ | SHIMOGA NEWS | 08 ಅಕ್ಟೋಬರ್ 2021
ಅಮಲಿನಲ್ಲಿ ಕುಳಿತಿದ್ದ ಯುವಕನನ್ನು ವಶಕ್ಕೆ ಪಡೆದು ಪೊಲೀಸರು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವಿಸಿರುವುದು ಬೆಳಕಿಗೆ ಬಂದಿದೆ. ಶಿವಮೊಗ್ಗದ ಉಷಾ ನರ್ಸಿಂಗ್ ಹೋಂ ಬಳಿ ಘಟನೆ ಸಂಭವಿಸಿದೆ.
ರಾಕೇಶ್ (27) ಎಂಬಾತ ಅಮಲಿನಲ್ಲಿ ಕುಳಿತಿದ್ದ. ಇದನ್ನು ಗಮನಿಸಿದ ಪೊಲೀಸರು ಆತನ ವಿಚಾರಣೆ ನಡೆಸಿದ್ದಾರೆ. ರಾಕೇಶನ ಮಾತಿನ ವರಸೆಯಿಂದ ಅನುಮಾನಗೊಂಡ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.
ಮೆಗ್ಗಾನ್ ಆಸ್ಪತ್ರೆಯಲ್ಲಿ ಗಾಂಜಾ ಸೇವನೆ ತಪಾಸಣೆಗೆ ತಂದಿರುವ ಟೆಸ್ಟ್ ಕಿಟ್ ಬಳಸಿ ತಪಾಸಣೆಗೆ ಒಳಪಡಿಸಲಾಯಿತು. ಈ ವೇಳೆ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ರಾಕೇಶ್ ವಿರುದ್ಧ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200