ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಸೆಪ್ಟೆಂಬರ್ 2021
ದಂಪತಿ ತೆರಳುತ್ತಿದ್ದ ಬೈಕನ್ನು ಓವರ್ ಟೇಕ್ ಮಾಡಿದ ಕಳ್ಳರು ಮಹಿಳೆಯ ಕೈಯಲ್ಲಿದ್ದ ಮೊಬೈಕ್ ಕಿತ್ತುಕೊಂಡು ಪಾರಿಯಾಗಿದ್ದಾನೆ. ಕಳ್ಳರ ವಾಹನವನ್ನು ಹಿಂಬಾಲಿಸಿದ ದಂಪತಿಗೆ ಕಳ್ಳರು ಚಾಕು ತೋರಿಸಿ ಬೆದರಿಕೆಯೊಡ್ಡಿದ್ದಾನೆ. ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಕಳ್ಳನನ್ನು ಬಂಧಿಸಿದ್ದಾರೆ.
ಬೊಮ್ಮನಕಟ್ಟೆ ರಸ್ತೆಯ ರೇಲ್ವೆ ಗೇಟ್ ಬಳಿ ಮೇದಾರಕೇರಿ ಬಳಿ ಘಟನೆ ಸಂಭವಿಸಿದೆ. ಹಾಡಹಗಲೆ ಘಟನೆ ಸಂಭವಿಸಿರುವುದು ಜನರಲ್ಲಿ ಆತಂಕ ಮೂಡಿಸಿದೆ.
ಹೇಗಾಯ್ತು ಘಟನೆ?
ಶಿವಮೊಗ್ಗ ಸಿಟಿಯಿಂದ ದಂಪತಿಯು ಪಿ ಅಂಡ್ ಟಿ ಕಾಲೋನಿಯಲ್ಲಿರುವ ತಮ್ಮ ಮನೆಗೆ ತೆರಳುತ್ತಿದ್ದರು. ಪತಿ ಬೈಕ್ ಚಲಾಯಿಸುತ್ತಿದ್ದರು. ಹಿಂಬದಿ ಕುಳಿತಿದ್ದ ಪತ್ನಿ ತಮ್ಮ ಮೊಬೈಲನ್ನು ಕೈಯಲ್ಲಿ ಹಿಡಿದುಕೊಂಡಿದ್ದರು. ರೈಲ್ವೆ ಗೇಟ್ ಬಳಿ ಬರುತ್ತಿದ್ದಂತೆ ಹಿಂಬದಿಯಿಂದ ಬೈಕ್’ನಲ್ಲಿ ಬಂದ ವ್ಯಕ್ತಿಯೊಬ್ಬ ಪತ್ನಿಯ ಕೈಯಲ್ಲಿದ್ದ ಮೊಬೈಲ್ ಕಿತ್ತುಕೊಂಡಿದ್ದಾನೆ. ವೇಗವಾಗಿ ಚಲಾಯಿಸಿಕೊಂಡು ಮುಂದಕ್ಕೆ ಹೋಗಿದ್ದಾನೆ.
ಚಾಕು ತೋರಿಸಿ ಬೆದರಿಕೆ
ಮೊಬೈಲ್ ಕಳ್ಳನನ್ನು ದಂಪತಿ ಹಿಂಬಾಲಿಸಲು ಮುಂದಾಗಿದ್ದಾರೆ. ಈ ವೇಳೆ ಮೊಬೈಲ್ ಕಳ್ಳ ಚಾಕು ತೋರಿಸಿ ಬೆದರಿಕೆಯೊಡ್ಡಿದ್ದಾನೆ. ಇದರಿಂದ ದಂಪತಿ ಆತಂಕಕ್ಕೀಡಾಗಿದ್ದರು. ಮಾಹಿತಿ ತಿಳಿಯುತ್ತಿದ್ದಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನಿಂದ ಮೊಬೈಲ್ ಫೋನ್, ಕೃತ್ಯಕ್ಕೆ ಬಳಕೆ ಮಾಡಿದ್ದ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200