ಶಿವಮೊಗ್ಗದ ಲೈವ್.ಕಾಂ | SHIMOGA NEWS | 14 ಫೆಬ್ರವರಿ 2022
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಗಾಂಜಾ ಸಾಗಣೆ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣ ಸಂಬಂಧ ಒಬ್ಬನನ್ನು ಬಂಧಿಸಲಾಗಿದೆ.
ಅಡ್ಡು ಅಲಿಯಾಸ್ ಮೊಹಮ್ಮದ್ ಇಬ್ರಾಹಿಂ (28) ಬಂಧತ. ಈತನ ಬಳಿಯಿಂದ 3 ಕೆ.ಜಿ 250 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ 97 ಸಾವಿರ ರೂ. ಎಂದು ಅಂದಾಜಿಸಲಾಗಿದೆ.
ಹೇಗೆ ಸಿಕ್ಕಿಬಿದ್ದ ಅಡ್ಡು?
ಶಿವಮೊಗ್ಗದ ಪದ್ಮಾ ಟಾಕೀಸ್ ಕಡೆಯಿಂದ ಅಂಬೇಡ್ಕರ್ ನಗರದ ಕಡೆಗೆ ಅಡ್ಡು ಗಾಂಜಾ ಕೊಂಡೊಯ್ಯುತ್ತಿದ್ದಾನೆ ಎಂದು ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಈ ಹಿನ್ನಲೆಯಲ್ಲಿ ಪೊಲೀಸರು ದಾಳಿ ಮಾಡಿದ್ದರು.
ರಾತ್ರಿ 10.30ರ ಹೊತ್ತಿಗೆ ಅಡ್ಡು ಬಿಳಿ ಪ್ಲಾಸ್ಟಿಕ್ ಕವರ್ ಹಿಡಿದು ಅಂಬೇಡ್ಕರ್ ನಗರದ ಕಡೆಗೆ ತೆರಳುತ್ತಿದ್ದಾಗ ದಾಳಿ ನಡೆಸಲಾಯಿತು. ಕವರ್’ನಲ್ಲಿ ಇದ್ದ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ | ಶಿವಮೊಗ್ಗದಲ್ಲಿ ಬದಲಾಯ್ತು ಗಾಂಜಾ ಮಾರಾಟ ಕ್ರಮ, ಈಗ ಹೇಗೆ ನಡೆಯುತ್ತಿದೆ ದಂಧೆ?
LATEST NEWS
- ರಾಜ್ಯವನ್ನೇ ಬೆಚ್ಚಿಬೀಳಿಸಿದ ಶಿವಮೊಗ್ಗದ ಡ್ರೈವರ್, 19 ಅಕೌಂಟ್, 25 ATM ಕಾರ್ಡ್, ₹55 ಕೋಟಿ ನಷ್ಟ, ಏನಿದು ಕೇಸ್?

- ಭದ್ರಾವತಿಯಲ್ಲಿ ಸಬ್ ಇನ್ಸ್ಪೆಕ್ಟರ್ಗಳ ಕಾಲಿನ ಮೂಳೆ, ಕೈ ಬೆರಳು ಕಟ್, ಆರೋಪಿ ಕಾಲಿಗೆ ಗುಂಡೇಟು

- ಶಿವಮೊಗ್ಗ ಜಿಲ್ಲೆಯಲ್ಲಿ ಮೈ ಸುಡುವ ಬಿಸಿಲಿನ ಜೊತೆಗೆ ಮೈ ನಡುಗಿಸುವ ಚಳಿ, ಇವತ್ತಿನ ಹವಾಮಾನ ವರದಿ

- ಶಿವಮೊಗ್ಗ ತಾಲೂಕಿನ ಹಲವೆಡೆ ಫೆಬ್ರವರಿ 8, 9 ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ನಂಜಪ್ಪ ಆಸ್ಪತ್ರೆಯಲ್ಲಿ ನಡುರಾತ್ರಿ ಚಿರತೆಗೆ ಸ್ಕ್ಯಾನಿಂಗ್, ಏನಿದು? ಹೇಗೆ ನಡೆಯಿತು ಪ್ರಕ್ರಿಯೆ?

About The Editor
ನಿತಿನ್ ಆರ್.ಕೈದೊಟ್ಲು






