| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ: ಖೈದಿಯೊಬ್ಬನಿಗೆ ತಲುಪಿಸಲು ಸ್ವೀಟ್ ಬಾಕ್ಸ್‌ನಲ್ಲಿ (Sweet Box) ಗಾಂಜಾ ತಂದಿದ್ದ ಯುವಕನೊಬ್ಬ ಜೈಲುಪಾಲಾಗಿದ್ದಾನೆ. ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ತಪಾಸಣೆ ವೇಳೆ ಯುವಕ ಸಿಕ್ಕಿಬಿದ್ದಿದ್ದು ಆತನ ವಿರುದ್ಧ ಪ್ರಕರಣ ದಾಖಲಾಗಿದೆ.
ಶಿವಮೊಗ್ಗದ ಸೋಮಿನಕೊಪ್ಪದ ಸೈಯದ್ ವಾಸೀಂ (25) ಬಂಧಿತ. ಬೇಕರಿಯಿಂದ ತಂದಿದ್ದ ಸ್ವೀಟ್ ಬಾಕ್ಸ್‌ನಲ್ಲಿ ಗಾಂಜಾ ಅಡಗಿಸಿಟ್ಟುಕೊಂಡು ತಂದಿದ್ದ.
ಏನಿದು ಪ್ರಕರಣ?
ಕೇಂದ್ರ ಕಾರಾಗೃಹದ ಖೈದಿ ಮೆಹಬೂಬ್ ಖಾನ್ ಎಂಬಾತನನ್ನು ಮಾತನಾಡಿಸಲು ಸೈಯದ್ ವಾಸೀಂ ಎಂಬಾತ ಆಗಮಿಸಿದ್ದ. ಖೈದಿ ಮೆಹಬೂಬ್ ಖಾನ್‌ಗೆ ನೀಡಲು ಸ್ವೀಟ್ ಬಾಕ್ಸ್ ತಂದಿದ್ದ. ಜೈಲು ಪ್ರವೇಶ ದ್ವಾರದಲ್ಲಿ KSISF ಭದ್ರತಾ ಸಿಬ್ಬಂದಿ ಸ್ವೀಟ್ ಬಾಕ್ಸ್ ತಪಾಸಣೆ ನಡೆಸಿದರು. ಅದರಲ್ಲಿ ಗಾಂಜಾ ಪತ್ತೆಯಾಗಿದೆ ಎಂದು ಆರೋಪಿಸಲಾಗಿದೆ. KSISF ಸಿಬ್ಬಂದಿ ಸೈಯದ್ ವಾಸೀಂನನ್ನು ವಶಕ್ಕೆ ಪಡೆದಿದ್ದಾರೆ.
![]()
ಘಟನೆ ಸಂಬಂಧ ಜೈಲು ಮುಖ್ಯ ಅಧೀಕ್ಷಕಿ ಪ್ರೀತಿ ದೂರು ನೀಡಿದ್ದು, ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಭದ್ರಾವತಿ ಡಿವೈಎಸ್‌ಪಿಯಾಗಿ ದಕ್ಷತಾ ಪದಕ ವಿಜೇತ ಪೊಲೀಸ್ ಅಧಿಕಾರಿ
Sweet Box
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
- ಶಿವಮೊಗ್ಗದಲ್ಲಿ ಬಸ್ ಹತ್ತಿ ಆಧಾರ್ ಕಾರ್ಡ್ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
- ಕೋಟೆ ರಸ್ತೆಯಲ್ಲಿ ಬ್ರಹ್ಮರಥೋತ್ಸವ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ, ಏನೇನೆಲ್ಲ ಪೂಜೆ ನೆರವೇರಿತು?
- ಅಡಿಕೆ ಧಾರಣೆ | 4 ಡಿಸೆಂಬರ್ 2025 | ಯಾವ್ಯಾವ ಅಡಿಕೆಗೆ ಎಷ್ಟಿತ್ತು ರೇಟ್?
- ಶಿವಮೊಗ್ಗ ಸಿಟಿಯ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್ ಇರಲ್ಲ
- ಶಿವಮೊಗ್ಗದ ಮೊಬೈಲ್ ಅಂಗಡಿಯಿಂದ ಹೊರ ಬಂದ ಮೆಕಾನಿಕ್ಗೆ ಕಾದಿತ್ತು ಶಾಕ್
- ಶಿವಮೊಗ್ಗ ಜಿಲ್ಲೆಗೆ ಇವತ್ತೂ ಮಳೆ ಅಲರ್ಟ್, ಎಷ್ಟು ಮಳೆಯಾಗುವ ಸಾಧ್ಯತೆ ಇದೆ? ಎಲ್ಲೆಲ್ಲಿ ಹೇಗಿದೆ ವಾತಾವರಣ?
![]()