ಶಿವಮೊಗ್ಗ ಬಸ್‌ ನಿಲ್ದಾಣದ ಬಳಿ ಯುವಕ ವಶಕ್ಕೆ, ಮೆಡಿಕಲ್‌ ಟೆಸ್ಟ್‌ ಬಳಿಕ ಕೇಸ್‌, ಆಗಿದ್ದೇನು?

ಶಿವಮೊಗ್ಗ: ನಗರದ ಖಾಸಗಿ ಬಸ್ ನಿಲ್ದಾಣದ ಇಂದಿರಾ ಕ್ಯಾಂಟೀನ್ ಸಮೀಪ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಯುವಕನೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಗಾಂಜಾ ಸೇವನೆ ದೃಢವಾದ ಹಿನ್ನೆಲೆ ಆತನ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.

ಉಬೇದ್ ಉಲ್ಲಾ (21) ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯ ಸಿಬ್ಬಂದಿ ಪುನೀತ್ ರಾವ್ ಎಂ. ಅವರು ಖಾಸಗಿ ಬಸ್ ನಿಲ್ದಾಣದ ಸುತ್ತಾಮುತ್ತ ಗಸ್ತು ತಿರುಗುತ್ತಿದ್ದರು. ಈ ವೇಳೆ ಇಂದಿರಾ ಕ್ಯಾಂಟೀನ್ ಸಮೀಪ ಯುವಕನೊಬ್ಬ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ. ಆತನನ್ನು ವಶಕ್ಕೆ ಪಡೆದು ಮೆಗ್ಗಾನ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಘಟನೆ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Shimoga-Private-Bus-Stand-Board