ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 18 ಜನವರಿ 2022
ಸಕ್ರೆಬೈಲು ಸಮೀಪ ಮರಕ್ಕೆ ಕಾರು ಡಿಕ್ಕಿಯಾಗಿ, ಬೆಂಕಿ ಹೊತ್ತುಕೊಂಡ ಪ್ರಕರಣದಲ್ಲಿ ಯುವಕನೊಬ್ಬ ಮೃತಪಟ್ಟಿದ್ದಾನೆ.
ಶಿವಮೊಗ್ಗದ ವೆಂಕಟೇಶನಗರದ ಸನತ್ (22) ಮೃತ ದುರ್ದೈವಿ. ಭದ್ರಾವತಿಯ ರುದ್ವಿಕ್ ಮತ್ತು ಅನೋಕ್ ಎಂಬುವವರು ಗಾಯಗೊಂಡಿದ್ದಾರೆ. ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮಂಡಗದ್ದೆಯಿಂದ ಮರಳುತ್ತಿದ್ದರು
ಮೂವರು ಯುವಕರು ಮಂಡಗದ್ದೆಗೆ ತೆರಳಿದ್ದರು. ಊಟ ಮುಗಿಸಿ ಮರಳುತ್ತಿದ್ದಾಗ ಸಕ್ರೆಬೈಲು ಬಳಿ ಕಾರು ಮರಕ್ಕೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಮೂವರಿಗೂ ಗಾಯವಾಗಿದೆ. ಗಂಭೀರ ಗಾಯಗೊಂಡಿದ್ದ ಸನತ್ ಮೃತಪಟ್ಟಿದ್ದಾನೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಮೂವರನ್ನು ಕಾರಿನಿಂದ ಹೊರಗೆಳೆದು ಆಸ್ಪತ್ರೆಗೆ ರವಾನಿಸಿದ್ದರು.
ಧಗಧಗ ಹೊತ್ತಿ ಉರಿದ ಕಾರು
ಅಪಘಾತಕ್ಕೀಡಾದ ಕಾರು ಧಗಧಗ ಹೊತ್ತಿ ಉರಿದಿದೆ. ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ ಬೆಂಕಿಯ ಕೆನ್ನಾಲಗೆಗೆ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ.
ತುಂಗಾ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತ ಸಂಬಂಧ ಪ್ರಕರಣ ದಾಖಲಾಗಿದೆ.
shimoga,
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422