SHIVAMOGGA LIVE NEWS
THIRTHAHALLI | ಅಸ್ವಸ್ಥನಾಗಿ ಗದ್ದೆ ಬದಿಯಲ್ಲಿ ಬಿದ್ದಿದ್ದ ವ್ಯಕ್ತಿಯೊಬ್ಬ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಆತನ ಸಾವಿನ ಕುರಿತು ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. (illegal sale of liquor)
ರಮೇಶ್ ಅಲಿಯಾಸ್ ಕಲಾಸಿಪಾಳ್ಯ (55) ಮೃತನು. ತೀರ್ಥಹಳ್ಳಿ ತಾಲೂಕು ಹೊದಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಲವಡ್ಕದ ಕುಟ್ರ ಗ್ರಾಮದಲ್ಲಿ ಘಟನೆ ಸಂಭವಿಸಿದೆ.
ಏನಿದು ಪ್ರಕರಣ? (illegal sale of liquor)
ಗ್ರಾಮದ ರಮೇಶ ಪ್ರಜ್ಞಾಹೀನ ಸ್ಥಿತಿಯಲ್ಲಿ ಗದ್ದೆ ಬದಿಯಲ್ಲಿ ಬಿದ್ದಿದ್ದ. ಮದ್ಯವ್ಯಸನಿಯಾಗಿದ್ದ ಈತ ಮದ್ಯ ಸೇವಿಸಿ ಬಿದ್ದಿರಬಹುದು ಎಂದು ಶಂಕಿಸಲಾಗಿತ್ತು. ಕೊನೆಗೆ ಗ್ರಾಮಸ್ಥರು ಆತನನ್ನು ತೀರ್ಥಹಳ್ಳಿ ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ರಮೇಶ ಮೃತಪಟ್ಟಿದ್ದಾನೆ. (illegal sale of liquor)
ಸಾವಿನ ಕುರಿತು ಅನುಮಾನ (illegal sale of liquor)
ರಮೇಶನ ಸಾವಿನ ಕುರಿತು ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಮದ್ಯ ಸೇವಿಸಿ ರಮೇಶ್ ಸಾವನ್ನಪ್ಪಿರಬಹುದು ಎಂದು ಶಂಕಿಸಿದ್ದಾರೆ. ಆತ ಮೃತಪಟ್ಟ ವಿಚಾರ ತಿಳಿದು ಗ್ರಾಮದಲ್ಲಿ ಜನರು ಅಕ್ರಮವಾಗಿ ಮದ್ಯ ಮಾರಾಟ ಮಾಡುವವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇನ್ನು, ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪ ಸಂಬಂಧ ವಸಂತ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದೈವ ಸನ್ನಿಧಿಯಲ್ಲಿ ಪ್ರತಿಜ್ಞೆ
ತಲವಡ್ಕದ ಕುಟ್ರ ಗ್ರಾಮದಲ್ಲಿ ಮದ್ಯ ಮಾರಾಟ ಮಾಡುವಂತಿಲ್ಲ ಎಂದು ಗ್ರಾಮಸ್ಥರು ನಿರ್ಧರಿಸಿದ್ದರು. ದೈವ ಸನ್ನಿಧಿಯಲ್ಲಿ ಈ ಪ್ರತಿಜ್ಞೆ ಮಾಡಿದ್ದರು. ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವಂತಿಲ್ಲ, ಹೊರ ಊರುಗಳಿಂದ ಮದ್ಯ ತರುವಂತಿಲ್ಲ ಎಂದು ನಿರ್ಣಯಿಸಲಾಗಿತ್ತು. ಊರಲ್ಲಿ ಅಲ್ಲಿಲ್ಲಿ ಬ್ಯಾನರ್ ಕೂಡ ಅಳವಡಿಸಲಾಗಿತ್ತು. ಇದಾಗಿ ಒಂದು ವಾರ ಕಳೆಯುವುದರಲ್ಲಿ ಘಟನೆ ಸಂಭವಿಸಿದೆ. ಗ್ರಾಮದಲ್ಲಿ ಅಕ್ರಮ ಮಾರಾಟ ನಡೆಯುತ್ತಿದ್ದು, ರಮೇಶ್ ಸಾವಿಗೆ ಕಾರಣವಾಗಿದೆ ಎಂದು ಆರೋಪಿಸಲಾಗಿದೆ.
ಕಲಾಸಿಪಾಳ್ಯದಲ್ಲಿ ಕೆಲಸ ಮಾಡುತ್ತಿದ್ದ
ಗ್ರಾಮದ ರಮೇಶ ಬೆಂಗಳೂರಿನ ಕಲಾಸಿಪಾಳ್ಯದಲ್ಲಿ ಕೆಲಸ ಮಾಡುತ್ತಿದ್ದ. ಇದೆ ಕಾರಣಕ್ಕೆ ಗ್ರಾಮದಲ್ಲಿ ಆತನನ್ನು ಕಲಾಸಿಪಾಳ್ಯ ಎಂದು ಅಡ್ಡ ಹೆಸರಿನೊಂದಿಗೆ ಕರೆಯಲಾಗುತ್ತಿತ್ತು. ಈತ ಮದ್ಯ ವ್ಯಸನಿಯಾಗಿದ್ದರಿಂದ ಗದ್ದೆ ಬದಿಯಲ್ಲಿ ಬಿದಿದ್ದಾಗ ಮದ್ಯ ಸೇವಿಸಿರಬಹುದು ಎಂದು ಶಂಕಿಸಲಾಗಿತ್ತು.
ಅಕ್ರಮ ಮದ್ಯದ ಹಾವಳಿ
ತೀರ್ಥಹಳ್ಳಿಯಲ್ಲಿ ಅಕ್ರಮ ಮದ್ಯ ಮಾರಾಟಗಾರರ ಹಾವಳಿ ಹೆಚ್ಚಿದೆ. ಸಣ್ಣಪುಟ್ಟ ಅಂಗಡಿಗಳು, ಮನೆಗಳಲ್ಲಿ ಮದ್ಯ ಮಾರಾಟ ನಡೆಸುತ್ತಿರುವ ಆರೋಪವಿದೆ. ಬಾರ್, ಮದ್ಯದ ಅಂಗಡಿಗಳಿಂದ ಮದ್ಯವನ್ನು ತಂದು ಪರವಾನಗಿ ಇಲ್ಲದೆ ಮಾರಾಟ ಮಾಡಲಾಗುತ್ತದೆ. ಇದನ್ನು ನಿಗ್ರಹಿಸಬೇಕು ಎಂದು ಈ ಹಿಂದೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಅಬಕಾರಿ ಇಲಾಖೆಗೆ ಸೂಚಿಸಿದ್ದರು. ಆದರೆ ಈತನಕ ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್ ಬಿದ್ದಿಲ್ಲ.
ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗ – ಸಾಗರ ಹೆದ್ದಾರಿಯಲ್ಲಿ ಅಪಘಾತ, ಮಾಜಿ ಸೈನಿಕ ಸಾವು
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.