ಶಿವಮೊಗ್ಗದ ಲೈವ್.ಕಾಂ | SHIMOGA NEWS | 4 ಜನವರಿ 2022
ಜಗಳ ಬಿಡಿಸಲು ಹೋದ ವ್ಯಕ್ತಿಯೊಬ್ಬರ ಕೊತ್ತಿಗೆಗೆ ಚಾಕುವಿನಿಂದ ಇರುದು ಗಾಯಗೊಳಿಸಲಾಗಿದೆ. ಶಿವಮೊಗ್ಗದ ವಿದ್ಯಾನಗರದಲ್ಲಿ ಘಟನೆ ಸಂಭವಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮೊಹಮ್ಮದ್ ಅನ್ವರ್ ಗಾಯಗೊಂಡಿದ್ದು, ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹೇಗಾಯ್ತು ಘಟನೆ?
ಬಾರ್ ಒಂದರಲ್ಲಿ ಕ್ಷುಲಕ ವಿಚಾರಕ್ಕೆ ಮೊಹಮ್ಮದ್ ಗೌಸ್ ಮತ್ತು ಮೋಹನ್ ಎಂಬುವವರ ಮಧ್ಯೆ ಜಗಳವಾಗುತ್ತಿತ್ತು. ಮೊಹಮ್ಮದ್ ಗೌಸ್ ಅವರ ಸಹೋದರ ಮೊಹಮ್ಮದ್ ಅನ್ವರ್ ಜಗಳ ಬಿಡಿಸಲು ಮುಂದಾಗಿದ್ದಾರೆ.
ಈ ವೇಳೆ ಸಿಟ್ಟಾದ ಮೋಹನ್, ಮೊಹಮ್ಮದ್ ಅನ್ವರ್ ಕೊರಳಿಗೆ ಚಾಕುವಿನಿಂದ ಇರಿದು, ಪರಾರಿಯಾಗಿದ್ದಾನೆ. ಕೂಡಲೆ ಗಾಯಾಳುವನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.