ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ನವೆಂಬರ್ 2021
ಕಾರು ಮತ್ತು ಲಾರಿ ಮಧ್ಯೆ ಅಪಘಾತ ಸಂಭವಿಸಿದೆ. ಕಾರು ಚಾಲಕ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಿನಯ ಗೌಡ (24) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ವಿನಯ್ ಗೌಡ ಅವರು ಬಾಣಿಗ ಗ್ರಾಮದಿಂದ ರಾತ್ರಿ ಸಾಗರದ ಕಡೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.
ಹೊಸಕೆರೆ – ಕೇಶವಪುರ ಮಧ್ಯೆ ಎದುರಿನಿಂದ ಬಂದ ಲಾರಿಯು ಆಲ್ಟೋ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಕಾರಿನಲ್ಲೇ ಸಿಲುಕಿ ವಿಯನಗೌಡ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಕಾರಿಗೆ ಡಿಕ್ಕಿ ಹೊಡೆದ ಬಳಿಕ ಲಾರಿ ಪಲ್ಟಿ ಹೊಡೆದಿದೆ. ಲಾರಿಯಲ್ಲಿ ತುಂಬಿದ್ದ ಭತ್ತದ ಮೂಟೆಗಳು ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಯಿತು.
ಲಾರಿ ಚಾಲಕ ಅತಿ ವೇಗವೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






