ಶಿವಮೊಗ್ಗದಲ್ಲಿ ಕೊಲೆ, ವ್ಯಕ್ತಿಗೆ ಇರಿದು, ತಲೆ ಮೇಲೆ ಕಲ್ಲು ಹಾಕಿ ಹತ್ಯೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 JUNE 2024

SHIMOGA : ಸ್ಮಶಾನದಲ್ಲಿ ಮದ್ಯ ಸೇವಿಸುತ್ತಿದ್ದ ಸಂದರ್ಭ ಸ್ನೇಹಿತರಿಬ್ಬರ ನಡುವೆ ಮಾತಿಗೆ ಮಾತು (Altercation) ಬೆಳೆದು ಒಬ್ಬನ ಕೊಲೆಯಾಗಿದೆ. ಶಿವಮೊಗ್ಗ – ಸಾಗರ ರಸ್ತೆಯ ಆಯನೂರು ಗೇಟ್‌ ಸಮೀಪದ ಸ್ಮಶಾನದಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಜೆ.ಪಿ.ನಗರದ ನಿವಾಸಿ ರಾಜುನಾಯ್ಕ ಮೃತ ವ್ಯಕ್ತಿ.

‘ರಾಜುನಾಯ್ಕ ತನ್ನ ಸ್ನೇಹಿತ ವಿಕ್ರಮ್‌ ಜೊತೆಗೆ ಕಳೆದ ರಾತ್ರಿ ಸ್ಮಶಾನದಲ್ಲಿ ಮದ್ಯ ಸೇವಿಸುತ್ತಿದ್ದ. ಈ ಸಂದರ್ಭ ಇಬ್ಬರ ಮಧ್ಯೆ ಗಲಾಟೆಯಾಗಿದೆ. ರಾಜುನಾಯ್ಕನಿಗೆ ಮಾರಕಾಸ್ತ್ರದಿಂದ ಚುಚ್ಚಿ, ತಲೆ ಮೇಲೆ ಕಲ್ಲು ಎತ್ತಿ ಹಾಕಿ ವಿಕ್ರಮ್‌ ಎಂಬಾತ ಹತ್ಯೆಗೈದಿದ್ದಾನೆʼ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ವಾಟ್ಸಪ್‌ ಮೂಲಕ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ವೈಯಕ್ತಿಕ ಕಾರಣಕ್ಕೆ ಇಬ್ಬರ ಮಧ್ಯೆ ವೈಮನಸು ಉಂಟಾಗಿ ಕೊಲೆಯಾಗಿದೆ. ವಿಕ್ರಮ್‌ನನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ. ತುಂಗಾ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಬೇಸಿಗೆಯಂತಹ ಬಿಸಿಲು, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ? ಇಲ್ಲಿದೆ ರಿಪೋರ್ಟ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment