ಮೂರು ರೂ. ಗೂಗಲ್ ಪೇ ಮಾಡಿ ಅಂದ್ರು, ಬ್ಯಾಂಕ್ ಖಾತೆಯಿಂದ 90 ಸಾವಿರ ಎಗರಿಸಿದ್ರು, ಖತರ್ನಾಕ್ ಕಳ್ಳರ ಕೈಚಳಕ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

ಶಿವಮೊಗ್ಗ ಲೈವ್.ಕಾಂ | SHIMOGA | 24 ಅಕ್ಟೋಬರ್ 2019

ಗೂಗಲ್‌ನಲ್ಲಿ ಕೋರಿಯರ್‌ವೊಂದರ ಕಸ್ಟಮರ್ ಕೇರ್ ಸಂಖ್ಯೆ ಪಡೆದು ಕರೆ ಮಾಡಿದ ವ್ಕಕ್ತಿ 69,993 ರೂ. ಕಳೆದುಕೊಂಡಿರುವ ಘಟನೆ ನಡೆದಿದೆ.

ಶಿವಮೊಗ್ಗದಿಂದ ಮುಂಬೈಗೆ ಕೋರಿಯರ್ ಮೂಲಕ ದಾಖಲೆಗಳನ್ನು ಕಳುಹಿಸಿದ ಕೆಎಚ್‌ಬಿ ಕಾಲೊನಿಯ ಕರುಣಾಕರ್ ಎಂಬುವವರೇ ಮೋಸಹೋದ ವ್ಯಕ್ತಿ. ಅ.೧೮ರಂದು ಕೋರಿಯರ್ ಕಳುಹಿಸಿದ್ದು, ತಲುಪದೇ ಇದ್ದುದ್ದರಿಂದ ಶಿವಮೊಗ್ಗದಲ್ಲಿ ಪಾರ್ಸಲ್ ಹೋಗದ ಬಗ್ಗೆ ವಿಚಾರಿಸಿದ್ದಾರೆ. ಆದರೆ, ಈ ಬಗ್ಗೆ ಮುಂಬೈ ಶಾಖೆಯಲ್ಲಿಯೇ ವಿಚಾರಿಸುವಂತೆ ಸೂಚಿಸಲಾಗಿದೆ. ಅದರಂತೆ, ಕರುಣಾಕರ್ ಅವರು ಗೂಗಲ್‌ನಲ್ಲಿ ಕೋರಿಯರ್‌ನ ಮುಂಬೈ ಕಸ್ಟಮರ್‌ಕೇರ್ ಸಂಖ್ಯೆ ಪಡೆದಿದ್ದಾರೆ.

ವಿಚಾರಿಸಿದಾಗ ದಾಖಲೆಗಳು ಮುಂಬೈಗೆ ಬಂದಿವೆ. ಆದರೆ, ಕೋರಿಯರ್ ಶುಲ್ಕದಲ್ಲಿ ಮೂರು ರೂ. ಕಡಿಮೆ ಪಾವತಿಸಿದ್ದಕ್ಕೆ ನಿಗದಿತ ಸ್ಥಳಕ್ಕೆ ತಲುಪಿಸಿಲ್ಲವೆಂದು ಮಾಹಿತಿ ನೀಡಿದ್ದಾರೆ. ಅದಕ್ಕಾಗಿ, ಬಾಕಿ ಹಣವನ್ನು ಗೂಗಲ್ ಪೇ ಅಥವಾ ಫೋನ್ ಪೇ ಮೂಲಕ ಪಾವತಿಸುವಂತೆ ತಿಳಿಸಿ, ಸಂಖ್ಯೆ ನೀಡಿದ್ದಾರೆ. ಸೂಚನೆಯನ್ವಯ ಹಣ ಕಳುಹಿಸಿದ್ದು, ಬಳಿಕ ಸಂಬಂಧಪಟ್ಟ ವ್ಯಕ್ತಿಯು ಲಿಂಕ್ ಫಾರ್ವರ್ಡ್ ಮಾಡಿದ್ದು, ಅದನ್ನು ಕ್ಲಿಕ್ಕಿಸುವಂತೆ ತಿಳಿಸಿದ್ದಾರೆ. ಅದಾದ ಕೆಲಹೊತ್ತಲ್ಲೇ ಖಾತೆಯಿಂದ 90 ಸಾವಿರ ರೂ. ಪೀಕಿದ್ದಾರೆ.

ಈ ಬಗ್ಗೆ ಬ್ಯಾಂಕ್‌ನಿಂದ ಎಸ್‌ಎಂಎಸ್ ಸಂದೇಶ ಬಂದ ತಕ್ಷಣ ಬ್ಯಾಂಕ್‌ನವರಿಗೆ ಮಾಹಿತಿ ನೀಡಿದ್ದಾರೆ. ಬ್ಯಾಂಕ್‌ನವರೂ ಉತ್ತಮ ಸ್ಪಂದನೆ ನೀಡಿ, ನಂತರ ವರ್ಗಾವಣೆ ಮಾಡಲಾದ ೨೦ ಸಾವಿರ ರೂ. ವಾಪಸ್ ಖಾತೆಗೆ ಜಮಾ ಮಾಡಿದ್ದಾರೆ. ಆದರೆ, ಮೊದಲ ಹಂತದಲ್ಲಿ ವರ್ಗಾಯಿಸಲಾದ 69,993 ರೂ. ವಾಪಸ್ ಪಡೆಯಲು ಸಾಧ್ಯವಾಗಿಲ್ಲ. ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 24, 2019

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಭದ್ರಾವತಿಯ ಭದ್ರಾ ನದಿಗೆ ರಾಶಿ ರಾಶಿ ತ್ಯಾಜ್ಯ, ವೈಜ್ಞಾನಿಕ ಕ್ರಮಕ್ಕೆ ಒತ್ತಾಯ

ಭದ್ರಾವತಿಯ ಭದ್ರಾ ನದಿಗೆ ರಾಶಿ ರಾಶಿ ತ್ಯಾಜ್ಯ, ವೈಜ್ಞಾನಿಕ ಕ್ರಮಕ್ಕೆ ಒತ್ತಾಯ

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಶಿವಮೊಗ್ಗ ಜಿಲ್ಲೆಯ ಮನೆ ಮನೆಗೂ ಭೇಟಿ ನೀಡ್ತಾರೆ ಗಣತಿದಾರರು, ಏನೇನು ಮಾಹಿತಿ ಕೊಡಬೇಕು?

ಶಿವಮೊಗ್ಗ ಜಿಲ್ಲೆಯ ಮನೆ ಮನೆಗೂ ಭೇಟಿ ನೀಡ್ತಾರೆ ಗಣತಿದಾರರು, ಏನೇನು ಮಾಹಿತಿ ಕೊಡಬೇಕು?

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

Leave a Comment