ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 2 MAY 2021
ಅನುಮತಿ ಇಲ್ಲದವರಿಗೆ ಆಕ್ಸಿಜನ್ ಸಿಲಿಂಡರ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಶಿವಮೊಗ್ಗದ ಆಟೋ ಕಾಂಪ್ಲೆಕ್ಸ್‍ನಲ್ಲಿರುವ ಎರಡು ಸಂಸ್ಥೆಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ವಿನೋಬಗರ ಠಾಣೆ ಸಬ್ ಇನ್ಸ್‍ಪೆಕ್ಟರ್ ಅವರು ಪರಿಶೀಲನೆ ನಡೆಸುತ್ತಿದ್ದ ವೇಳೆ ಆಕ್ಸಿಜನ್ ಸಿಲಿಂಡರ್ ಮಾರಾಟ ಪ್ರಕರಣ ಬೆಳಕಿಗೆ ಬಂದಿದೆ. ಆಟೋ ಕಾಂಪ್ಲಕ್ಸ್‍ನಲ್ಲಿರುವ ಎಂಎಸ್‍ಪಿಎಲ್ ಗ್ಯಾಸಸ್ ಮತ್ತು ಶಿವಮೊಗ್ಗ ಇಂಡಸ್ಟ್ರಿಯಲ್ ಗ್ಯಾಸಸ್ ಸಂಸ್ಥೆಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಎಂಟು ಆಕ್ಸಿಜನ್ ಸಿಲಿಂಡರ್‍ಗಳನ್ನು ವಶಕ್ಕೆ ಪಡೆಯಲಾಗಿದೆ.
ಕರೋನ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಆಕ್ಸಿಜನ್ ಅಭಾವ ತಪ್ಪಿಸಲು ಸರ್ಕಾರ, ಆಕ್ಸಿಜನ್ ಸಿಲಿಂಡರ್ ಮಾರಾಟದ ಮೇಲೆ ನಿರ್ಬಂಧ ವಿಧಿಸಿದೆ. ಖಾಸಗಿ ಕಂಪನಿಗಳು, ಗ್ಯಾರೇಜ್‍ಗಳು, ಕೈಗಾರಿಕೆಗಳಿಗೆ ಆಕ್ಸಿಜನ್ ಮಾರಾಟ ಮಾಡುವಂತಿಲ್ಲ. ಆಸ್ಪತ್ರೆಗಳು ಮತ್ತು ಅನುಮತಿ ಪಡೆದ ಕೈಗಾರಿಕೆಗಳಿಗೆ ಮಾತ್ರ ಆಕ್ಸಿಜನ್ ಸಿಲಿಂಡರ್ ಮಾರಾಟ ಮಾಡಬೇಕಿದೆ.
ಆಟೋ ಕಾಂಪ್ಲೆಕ್ಸ್‍ನಲ್ಲಿರುವ ಎರಡು ಸಂಸ್ಥೆಗಳು ಅನುಮತಿ ಪಡೆಯದವರಿಗೆ ಸಿಲಿಂಡರ್ ಮಾರಾಟ ಮಾಡಿದ್ದಕ್ಕೆ, ಸಾಂಕ್ರಾಮಿಕ ಕಾಯಿಲೆ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ವಿನೋಬನಗರ ಠಾಣೆಯಲ್ಲಿ ಎಫ್ಐಆರ್ ಆಗಿದ್ದು, ತನಿಖೆ ಮುಂದುವರೆದಿದೆ.
ನೀವಿನ್ನೂ ಕರೋನ ಲಸಿಕೆ ಪಡೆದಿಲ್ಲವಾ? ಕೂಡಲೆ ಕೆಳಗಿರುವ ಫೋಟೊದಲ್ಲಿನ ನಂಬರ್‍ಗೆ ಕರೆ ಮಾಡಿ, ಸುರಕ್ಷಿತವಾಗಿ ಲಸಿಕೆ ಪಡೆಯಿರಿ
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422