ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 9 DECEMBER 2023
SHIKARIPURA : ಖಾಸಗಿ ಬಸ್ ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿದ್ದು ಮಾಜಿ ಪೈಲ್ವಾನ್ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಶಿಕಾರಿಪುರ ತಾಲೂಕು ಗಾಮ ಕ್ರಾಸ್ ಬಳಿ ಘಟನೆ ಸಂಭವಿಸಿದೆ.
ಪಟ್ಟಣದ ವಿನಾಯಕ ನಗರ ನಿವಾಸಿ ಕುಸ್ಕೂರು ಸತೀಶ್ (54) ಮೃತರು. ಜಮೀನಿಗೆ ತೆರಳಿದ್ದ ಸತೀಶ್ ಅವರಿಗೆ ಸಾಲೂರು ರಸ್ತೆ ಗಾಮ ಕ್ರಾಸ್ ಬಳಿ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ಕುಸಿದಿದ್ದ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದರು. ಮೃತರಿಗೆ ಪತ್ನಿ, ಪುತ್ರಿ ಇದ್ದಾರೆ. ಡಿ.17ರಂದು ಸತೀಶ್ ಅವರ ಮಗಳ ಮದುವೆ ನಿಶ್ಚಯವಾಗಿತ್ತು.
ಇದನ್ನೂ ಓದಿ – ಶಿಕಾರಿಪುರದಲ್ಲಿ ಜಿಲ್ಲಾಧಿಕಾರಿ ಜನತಾ ದರ್ಶನ, ದಿನಾಂಕ ಫಿಕ್ಸ್, ಎಲ್ಲಿ ನಡೆಯಲಿದೆ?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422