ಶಿವಮೊಗ್ಗ ಬಸ್‌ ನಿಲ್ದಾಣದಲ್ಲಿ ರಾಮನಗರದ ವ್ಯಕ್ತಿ ನೇಣಿಗೆ ಶರಣು, ಗೊತ್ತಾಗಿದ್ದು ಹೇಗೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

NEWS HIGHLIGHTS

ಶಿವಮೊಗ್ಗ: ನಗರದ ಕೆಎಸ್‌ಆರ್‌ಟಿಸಿ (KSRTC) ಬಸ್ ನಿಲ್ದಾಣದ ಸಾರ್ವಜನಿಕ ಶೌಚಾಲಯದಲ್ಲಿ ರಾಮನಗರ ಮೂಲದ ವ್ಯಕ್ತಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಮೃತನನ್ನು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಹೊನ್ನಿಗನಹಳ್ಳಿಯ ಮರಿಸ್ವಾಮಿ ಹೆಚ್.ಎಂ. ಎಂದು ಗುರುತಿಸಲಾಗಿದೆ.

Ramanagara-Man-ends-life-at-Shimoga-KSRTC-Bus-Stand.

ಇಂದು ಬೆಳಿಗ್ಗೆ ಬಸ್ ನಿಲ್ದಾಣದ ಶೌಚಾಲಯವನ್ನು ಸ್ವಚ್ಛಗೊಳಿಸಲು ಸಿಬ್ಬಂದಿ ಹೋದಾಗ ಘಟನೆ ಗೊತ್ತಾಗಿದೆ. ಮರಿಸ್ವಾಮಿ ಅವರು ತಾವು ಧರಿಸಿದ್ದ ಪ್ಯಾಂಟ್ ಬಳಸಿ ಶೌಚಾಲಯದ ಕಿಟಕಿಗೆ ನೇಣು ಹಾಕಿಕೊಂಡಿದ್ದಾರೆ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ದೊಡ್ಡಪೇಟೆ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸದ್ಯ ಮೃತದೇಹವನ್ನು ನಗರದ ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!