SHIVAMOGGA LIVE NEWS | 7 FEBRUARY 2023
SHIMOGA : ನಗರದ ಹೊರ ವಲಯ ಮತ್ತು ಖಾಲಿ ಜಾಗಗಳಲ್ಲಿ ಪೊಲೀಸ್ ಇಲಾಖೆ ದಿಢೀರ್ ಕಾರ್ಯಾಚರಣೆ ನಡೆಸಿ 25 ಮಂದಿಯನ್ನು ವಶಕ್ಕೆ ಪಡೆದಿದೆ. ಠಾಣೆಯಲ್ಲಿ ಅವರ ಪರಿಶೀಲನೆ ನಡೆಸಿ, 12 ಮಂದಿ ವಿರುದ್ಧ ಲಘು ಪ್ರಕರಣ (Petty Case) ದಾಖಲಿಸಿದ್ದಾರೆ.
ದೊಡ್ಡಪೇಟೆ ಠಾಣೆ ಇನ್ಸ್ ಪೆಕ್ಟರ್ ಮತ್ತು ಪಿಎಸ್ಐ ನೇತೃತ್ವದ ತಂಡ ವಿಶೇಷ ಕಾರ್ಯಾಚರಣೆ ನಡೆಸಿತು. ಹೊರವಲಯ, ಖಾಲಿ ಸ್ಥಳಗಳಲ್ಲಿ ಕಳೆದ ರಾತ್ರಿ ಏರಿಯಾ ಡಾಮಿನೇಷನ್ ವಿಶೇಷ ಗಸ್ತು ಕೈಗೊಳ್ಳಲಾಗಿತ್ತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
25 ಮಂದಿ ವಶಕ್ಕೆ
ಗಸ್ತು ವೇಳೆ ಅನುಮಾನಾಸ್ಪದ ವ್ಯಕ್ತಿಗಳು, ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ 25 ಮಂದಿಯನ್ನು ವಶಕ್ಕೆ ಪಡೆಯಲಾಗಿತ್ತು. ಅವರನ್ನು ದೊಡ್ಡಪೇಟೆ ಠಾಣೆಗೆ ಕರೆತಂದು ಪರಿಶೀಲನೆ ನಡೆಸಲಾಯಿತು. ಈ ವೇಳೆ 12 ಮಂದಿ ವಿರುದ್ಧ ಲಘು ಪ್ರಕರಣ (Petty Case) ದಾಖಲು ಮಾಡಲಾಗಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಅಪಘಾತ, ಇಬ್ಬರು ಸಾವು | 5 ಅಪಘಾತ ಸುದ್ದಿಗಳು