ಶಿವಮೊಗ್ಗ: ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದ ಆವರಣಕ್ಕೆ ಹೊರಗಿನಿಂದ ನಿಷೇಧಿತ ವಸ್ತುಗಳನ್ನು ಎಸೆದಿರುವ (packet) ಘಟನೆ ಬೆಳಕಿಗೆ ಬಂದಿದೆ. ಕಾರಾಗೃಹದ ಭದ್ರತಾ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಈ ವಸ್ತುಗಳು ಪತ್ತೆಯಾಗಿದ್ದು, ಜೈಲು ಅಧಿಕಾರಿಗಳು ಪೊಲೀಸ್ ದೂರು ದಾಖಲಿಸಿದ್ದಾರೆ.
ಜನವರಿ 30ರ ರಾತ್ರಿ ಕೇಂದ್ರ ಕಾರಾಗೃಹದ ಭದ್ರಾ ಸೆಕ್ಷನ್ ಆವರಣದಲ್ಲಿ ಜೈಲು ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಕಾರಾಗೃಹದ ಹೊರಗಿನಿಂದ ಪ್ಲಾಸ್ಟಿಕ್ ಕವರ್‌ನಲ್ಲಿ ಸುತ್ತಿದ ಪೊಟ್ಟಣಗಳನ್ನು ಜೈಲಿನ ಆವರಣದೊಳಗೆ ತೂರಿ ಬಂದಿವೆ. ತಕ್ಷಣ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ನಿಷೇಧಿತ ವಸ್ತುಗಳು ಪತ್ತೆಯಾಗಿವೆ.

ಪೊಟ್ಟಣಗಳಲ್ಲಿ ಒಂದು ಸಣ್ಣ ಕೀಪ್ಯಾಡ್ ಮೊಬೈಲ್ ಫೋನ್, ಅಂದಾಜು 22 ಗ್ರಾಂ ತೂಕದ ಗಾಂಜಾ, 4 ಸಿಗರೇಟ್ ಪ್ಯಾಕೆಟ್ ಮತ್ತು ಒಂದು ಕಪ್ಪು ಬಣ್ಣದ ಚಾರ್ಜಿಂಗ್ ಕೇಬಲ್ ಇದ್ದವು. ಕಾರಾಗೃಹದೊಳಗೆ ನಿಷೇಧಿತ ವಸ್ತು ಎಸೆದವರ ವಿರುದ್ಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ‘ಕುಡುಕರ ರಾಜ್ಯ ಮಾಡಿ ದಕ್ಷಿಣ ಭಾರತದ ನಾಯಕನಾಗಲು ಹೊರಟಿದ್ದಾರೆ ಸಿದ್ದರಾಮಯ್ಯ’, ವಿಜಯೇಂದ್ರ ಗರಂ


