ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ PA ಅಂತಾ ಹಣ ಪಡೆದಿದ್ದ ವ್ಯಕ್ತಿ ಶಿವಮೊಗ್ಗದಲ್ಲಿ ಅರೆಸ್ಟ್‌, ಏನಿದು ಕೇಸ್‌

ಶಿವಮೊಗ್ಗ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಆಪ್ತ ಕಾರ್ಯದರ್ಶಿ ಎಂದು ನಂಬಿಸಿ ರಿಕ್ರಿಯೇಷನ್ ಕ್ಲಬ್ ಲೈಸನ್ಸ್ ಕೊಡಿಸುವುದಾಗಿ ಹೇಳಿ ₹15 ಲಕ್ಷ ಹಣ ಪಡೆದು ವಂಚಿಸಿದ್ದ ಆರೋಪಿಯನ್ನು ತುಂಗಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗದ ಮಂಜುನಾಥ ಹಂಚಿ ಎಂಬುವವರಿಗೆ ರಿಕ್ರಿಯೇಷನ್ ಕ್ಲಬ್ ಲೈಸನ್ಸ್ ಕೊಡಿಸುವುದಾಗಿ ನಂಬಿಸಿ ಆರೋಪಿಯು ಹಣ ಪಡೆದು ವಂಚನೆ ಮಾಡಿದ್ದ. ಮಂಜುನಾಥ ಹಂಚಿ ನೀಡಿದ ದೂರಿನ ಮೇರೆಗೆ ಶರಾವತಿನಗರದ ಹೇಮಂತ್ ಕುಮಾರ್ ಅಲಿಯಾಸ್‌ ಗಣೇಶ್ (30) ಎಂಬಾತನನ್ನು ಬಂಧಿಸಲಾಗಿದೆ.

070426-Tunga-Nagara-Police-Station-General-Image.avif

ಜುಲೈ 29ರಂದು ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಚಿಕ್ಕ ಅಂಗಳ ಗ್ರಾಮದ ರಸ್ತೆ ಬಳಿ ಹೇಮಂತ್‌ ಕುಮಾರನನ್ನು ಬಂಧಿಸಲಾಗಿದೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ತುಂಗಾನಗರ ಇನ್‌ಸ್ಪೆಕ್ಟರ್ ಕೆ.ಟಿ. ಗುರುರಾಜ್, ಪಿಎಸ್‌ಐ ಮಂಜಮ್ಮ, ಸಿಬ್ಬಂದಿ ಶೋಭರಾಣಿ, ನಾಗರಾಜ, ಹರೀಶ್ ನಾಯ್ಕ, ನಿತಿನ್, ತಮ್ಮಣ್ಣ ಜಂಬಗಿ ಕಾರ್ಯಾಚರಣೆ ನಡೆಸಿದ್ದರು ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.