ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ
ಶಿವಮೊಗ್ಗ: ಖಾಸಗಿ ಬಸ್ ನಿಲ್ದಾಣದಲ್ಲಿ ಪೊಲೀಸರು ಅನುಮಾನದ ಮೇರೆಗೆ ಯುವಕನನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢವಾಗಿದೆ. ಈ ಹಿನ್ನೆಲೆ ಯುವಕನನ್ನು ಬಂಧಿಸಲಾಗಿದೆ (Arrest).
ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದ ಪೊಲೀಸರು ಗಸ್ತು ಮಾಡುವಾಗ 3ನೇ ಪ್ಲಾಟ್‌ಫಾರಂನಲ್ಲಿ ದರ್ಶನ್ ಎಂಬಾತ ಅಮಲಿನಲ್ಲಿದ್ದಂತೆ ಕಾಣಿಸಿತು. ಆತನನ್ನು ವಶಕ್ಕೆ ಪಡೆದು ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಈ ವೇಳೆ ಆತ ಗಾಂಜಾ ಸೇವನೆ ಮಾಡಿರುವುದು ದೃಢವಾಗಿದೆ. ಈ ಹಿನ್ನೆಲೆ ದೊಡ್ಡಪೇಟೆ ಠಾಣೆ ಪೊಲೀಸರು ದರ್ಶನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪುರಲೆಯಲ್ಲಿ ಗಾಂಜಾ ವ್ಯಸನಿಗಳು ಅರೆಸ್ಟ್
ಪುರಲೆಯ ಅಪೂರ್ವ ಲೇಔಟ್ ಬಳಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಯುವಕರನ್ನು ವಶಕ್ಕೆ ಪಡೆದು ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಗಾಂಜಾ ಸೇವನೆ ದೃಢವಾದ ಹಿನ್ನೆಲೆ ರಾಕೇಶ್, ಮೊಹಮದ್ ಹುಸೈನ್ ಎಂಬಾತನನ್ನು ಬಂಧಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಮೀಟರ್ ರೀಡಿಂಗ್‌ಗೆ ತೆರಳಿದ್ದ ಮೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ, ಜೀವ ಬೆದರಿಕೆ, ಆಗಿದ್ದೇನು?
Arrest


