ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 4 JANUARY 2024 Arrest
ಆಯನೂರು : ಹಾರನಹಳ್ಳಿ ಸಮೀಪ ಸವಳಂಗ – ಆಯನೂರು ರಸ್ತೆಯಲ್ಲಿ ಕಾರೊಂದಕ್ಕೆ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಸ್ಪೂರ್ತಿ ಮತ್ತು ರಂಗಸ್ವಾಮಿ ಎಂಬುವವರು ಗಾಯಗೊಂಡಿದ್ದಾರೆ. ಹಾರನಹಳ್ಳಿ ಜಾತ್ರೆಗೆ ತೆರಳುತ್ತಿದ್ದ ಸ್ವಿಫ್ಟ್ ಕಾರಿಗೆ ಟಾಟಾ ನೆಕ್ಸಾನ್ ಕಾರು ಡಿಕ್ಕಿ ಹೊಡೆದಿದೆ. ಅಪಘಾತಪಡಿಸಿದ ಟಾಟಾ ನೆಕ್ಸಾನ್ ಕಾರು ಸ್ಥಳದಲ್ಲಿ ನಿಲ್ಲಿಸದೆ ಪರಾರಿಯಾಗಿದೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಡಿಕ್ಕಿ ಹೊಡೆದು ಪರಾರಿಯಾದ ಕಾರು
ಆಯನೂರು : ಇಲ್ಲಿನ ಗ್ರಾಮ ಪಂಚಾಯಿತಿ ಕಚೇರಿ ಸಮೀಪ ರಾಜ್ಯ ಹೆದ್ದಾರಿಯಲ್ಲಿ ಬೈಕ್‌ಗೆ ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬೈಕ್ ಸವಾರ ಸಂಜಯ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ. ಕೂಡಲೆ ಸಂಜಯ್‌ನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದ್ಯಾವಿನಕೆರೆ ಕಡೆಯಿಂದ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆಯನೂರಿನಲ್ಲಿ ಬೈಕ್, ಕಾರು ಡಿಕ್ಕಿ
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ ಉದ್ಯಮಿಗೆ ಸಂಕಷ್ಟ ತಂದ ವಾಟ್ಸಪ್ ಗ್ರೂಪ್, ಆಗಿದ್ದೇನು?
ಭದ್ರಾವತಿ : ಗಾಂಧಿ ಪಾರ್ಕ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಅವಾಚ್ಯವಾಗಿ ಬೈದಾಡುತ್ತಿದ್ದ ಯುವಕನ್ನು ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಆತ ಗಾಂಜಾ ಸೇವಿಸಿರುವುದು ದೃಢವಾದ ಹಿನ್ನೆಲೆ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪ್ರವೀಣ್ ಅಲಿಯಾಸ್ ಭೂತ ಎಂದು ಗುರುತಿಸಲಾಗಿದೆ. ಭದ್ರಾವತಿ ನ್ಯೂ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಭದ್ರಾವತಿಯಲ್ಲಿ ಭೂತ ಅರೆಸ್ಟ್
ಇದನ್ನೂ ಓದಿ » ಯುದ್ಧ ಟ್ಯಾಂಕರ್‌ಗೆ ಕೊನಗೂ ಸಿಕ್ತು ‘ಫ್ರೀಡಂ’, ಇದು ಶಿವಮೊಗ್ಗ ಲೈವ್.ಕಾಂ ಇಂಪ್ಯಾಕ್ಟ್
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422