ಅನುಪಿನಕಟ್ಟೆ ತುಂಗಾ ಚಾನಲ್‌ ಬಳಿ ಪೊಲೀಸ್‌ ದಾಳಿ, ಇಬ್ಬರು ಅರೆಸ್ಟ್‌, ಏನಿದು ಪ್ರಕರಣ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಶಿವಮೊಗ್ಗ: ಅನುಪಿನಕಟ್ಟೆ ರಸ್ತೆಯ ತುಂಗಾ ಮೇಲ್ದಂಡೆ ಚಾನಲ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಮೇಲೆ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಬಂಧಿತರನ್ನು ಸೈಯ್ಯದ್ ಅಹಮ್ಮದ್ ಅಲಿಯಾಸ್ ಗುಡ್ಡು (24) ಮತ್ತು ಮಲ್ಲಿಕ್ ಅಲಿಯಾಸ್ ತಬ್ರೇಜ್ (22) ಎಂದು ಗುರುತಿಸಲಾಗಿದೆ.

Two-arrested-near-anupinakatte-in-Shimoga

ಖಚಿತ ಮಾಹಿತಿ ಮೇರೆಗೆ ದಾಳಿ

ತುಂಗಾ ಚಾನಲ್ ಹತ್ತಿರ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಹಿನ್ನೆಲೆ ತುಂಗಾ ನಗರ ಠಾಣೆ ಪೊಲೀಸರು ದಾಳಿ ನಡೆಸಿದರು. ಆರೋಪಿಗಳನ್ನು ವಶಕ್ಕೆ ಪಡೆದು ಅವರಿಂದ ₹60,000 ಮೌಲ್ಯದ 1 ಕೆಜಿ 270 ಗ್ರಾಂ ತೂಕದ ಗಾಂಜಾ ಹಾಗೂ ₹600 ನಗದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.