ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 1 ಮಾರ್ಚ್ 2022
ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಯುವಕನೊಬ್ಬನ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಗಾಂಜಾ ಸೇವನೆ ಮಾಡಿರುವುದು ದೃಢವಾಗಿದ್ದು, ಆತನನ್ನು ಬಂಧಿಸಿದ್ದಾರೆ.
ಜೆ.ಸಿ.ನಗರ ನಿವಾಸಿ ಅರ್ಬಾಜ್ ಖಾನ್ (21) ಬಂಧಿತ. ಪೊಲೀಸರು ಗಸ್ತು ತಿರುಗುತ್ತಿದ್ದ ಸಂದರ್ಭ ಖಾಸಗಿ ಬಸ್ ನಿಲ್ದಾಣದ ಬಳಿ ಅರ್ಬಾಜ್ ಖಾನ್ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ. ವಿಚಾರಣೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವ ಅನುಮಾನ ಮೂಡಿದೆ.
ಅರ್ಬಾಜ್ ಖಾನ್’ನನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಈತ ಗಾಂಜಾ ಸೇವನೆ ಮಾಡಿರುವುದು ದೃಢವಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ | ಶಿವಮೊಗ್ಗದಲ್ಲಿ ಗಾಂಜಾ ಮತ್ತಲ್ಲಿದ್ದ ತಲೈವಾ ಅರೆಸ್ಟ್
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






