ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 18 ಅಕ್ಟೋಬರ್ 2020
ಅಡ್ಡದಿಡ್ಡಿಯಾಗಿ ವಾಹನ ಚಲಾಯಿಸುತ್ತಿದ್ದವರನ್ನು ತಡೆದು ಪ್ರಶ್ನಿಸಿದ್ದಕ್ಕೆ ರೌಡಿ ಶೀಟರ್ ಮತ್ತು ಆತನ ಸಹಚರರು ಪೊಲೀಸ್ ಸಿಬ್ಬಂದಿ ಮೇಲೆಯೇ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಅವರ ಹತ್ಯೆಗೆ ಪ್ರಯತ್ನಿಸಿದ್ದು, ಪೊಲೀಸ್ ಜೀಪ್ ಬರುವುದನ್ನು ಕಂಡು ಪರಾರಿಯಾಗಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣೆ ಮುಖ್ಯ ಪೇದೆ ಅರುಣ್ ಕೆ.ಎಂ ಅವರಿಗೆ ಗಂಭೀರ ಗಾಯವಾಗಿದೆ. ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಿಕಿತ್ಸೆ ನಡೆಯುತ್ತಿದ್ದು ಸದ್ಯ ಅರುಣ್ ಅವರು ಚೇತರಿಸಿಕೊಳ್ಳುತ್ತಿದ್ದಾರೆ.
ಹೇಗಾಯ್ತು ಘಟನೆ?
ಅರೋಪಿಯೊಬ್ಬನ ಪತ್ತೆಗಾಗಿ ಅರುಣ್ ಅವರು ರಾತ್ರಿ ಸಾಗರ ರಸ್ತೆಯಲ್ಲಿ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ರೌಡಿ ಶೀಟರ್ ಪ್ರವೀಣ್ ಮತ್ತು ಆತನ ಇಬ್ಬರು ಸಹಚರರು ಸ್ಕೂಟಿಯನ್ನು ಅಡ್ಡಾದಿಡ್ಡಿಯಾಗಿ ಚಲಿಸುತ್ತಿದ್ದರು. ಮುಖ್ಯ ಪೇದೆ ಅರುಣ್ ಅವರು ಇದನ್ನು ಪ್ರಶ್ನಿಸಿದ್ದಾರೆ. ಅಡ್ಡದಡ್ಡಿ ವಾಹನ ಚಲಾಯಿಸಿ ಸಾರ್ವಜನಿಕರಿಗೆ ತೊಂದರೆ ಕೊಡದಂತೆ ತಿಳಿಸಿದ್ದಾರೆ. ಇದರಿಂದ ಕುಪಿತರಾದ ಮೂವರು ಅವಾಚ್ಯವಾಗಿ ನಿಂದಿಸಿ, ಅರುಣ್ ಮೇಲೆ ದಾಳಿ ನಡೆಸಿದ್ದಾರೆ.
ರಾಡ್ನಿಂದ ಹಲ್ಲೆ, ಕಲ್ಲಿನೇಟು
ಸ್ಕೂಟಿಯಲ್ಲಿಟ್ಟಿದ್ದ ರಾಡ್ನಿಂದ ಅರುಣ್ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಕಣ್ಣು, ಮೂಗು ಸೇರಿದಂತೆ ತಲೆಯ ಬಹುಭಾಗಕ್ಕೆ ಹಲ್ಲೆ ನಡೆಸಲಾಗಿದೆ. ಈ ವೇಳೆ ರಸ್ತೆ ಪಕ್ಕದಲ್ಲಿದ್ದ ಕಲ್ಲು ತೆಗದುಕೊಂಡು ಅರುಣ್ ಅವರ ತಲೆ, ಬೆನ್ನು, ಹೊಟ್ಟೆ ಭಾಗಕ್ಕೆ ಜಜ್ಜಿ ಹತ್ಯೆಗೆ ಯತ್ನಿಸಲಾಗಿದೆ ಎಂದು ಎಫ್ಐಆರ್ನಲ್ಲಿ ದಾಖಲಿಸಲಾಗಿದೆ.
ಜೀಪ್ ನೋಡಿ ಎಸ್ಕೇಪ್
ಅರುಣ್ ಅವರ ಮೇಲಿನ ಹಲ್ಲೆಯಾಗುವುದನ್ನು ಗಮನಿಸಿ ಅವರ ಪರಿಚಿತರೊಬ್ಬರು ಬಿಡಿಸಲು ಹೋಗಿದ್ದಾರೆ. ಅವರ ಕಡೆಗೂ ಈ ಮೂವರು ಕಲ್ಲು ಬೀಸಿದ್ದಾರೆ. ಈ ವೇಳೆ ಸಾಗರ ರಸ್ತೆಯಲ್ಲಿ ಪೊಲೀಸ್ ಜೀಪ್ ಬರುವುದನ್ನು ಗಮನಿಸಿ ಮೂವರು ಎಸ್ಕೇಪ್ ಆಗಿದ್ದಾರೆ. ತುಂಗಾ ನಗರ ಠಾಣೆಯ ಪೊಲೀಸ್ ಜೀಪ್ನಲ್ಲೇ ಅರುಣ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅರುಣ್ ಅವರ ತಲೆ ಭಾಗ, ಕುತ್ತಿಗೆ, ಬೆನ್ನು, ಹೊಟ್ಟೆಗೆ ಗಂಭೀರ ಗಾಯವಾಗಿದೆ. ಈ ಸಂಬಂಧ ರೌಡಿ ಶೀಟರ್ ಪ್ರವೀಣ್ ಮತ್ತು ಆತನ ಇಬ್ಬರು ಸಹಚರರ ವಿರುದ್ಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆ ಕಾರ್ಯ ನಡೆಯುತ್ತಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]