SHIMOGA NEWS, 17 NOVEMBER 2024
ಮದ್ಯ ಸೇವಿಸಿ ವಾಹನ ಚಲಾಯಿಸಿದವರಿಗೆ ದಂಡ
ಭದ್ರಾವತಿ : ನಗರದಲ್ಲಿ ಈಚೆಗೆ ಮದ್ಯಪಾನ ಮಾಡಿ ವಾಹನ ಚಾಲನೆ (Drive) ಮಾಡಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 10 ಸಾವಿರ ರೂ. ದಂಡ ವಿಧಿಸಲಾಗಿದೆ. ಇಬ್ಬರು ಸವಾರರನ್ನು ತಪಾಸಣೆಗೆ ಒಳಪಡಿಸಿದಾಗ ಮದ್ಯ ಸೇವಿಸಿರುವುದು ಸಾಬೀತಾಗಿತ್ತು. ಆದ್ದರಿಂದ ಸಂಚಾರ ಠಾಣೆ ಪೊಲೀಸರು ದಂಡ ವಿಧಿಸಿದ್ದರು. ದಂಡದ ಮೊತ್ತವನ್ನೂ ಸಂಗ್ರಹಿಸಲಾಗಿದೆ.
ಜೂಜಾಟ, ಒಬ್ಬನ ಬಂಧನ
ಬಟ್ಟೆಮಲ್ಲಪ್ಪ : ತಾಲ್ಲೂಕಿನ ಬಟ್ಟೆಮಲ್ಲಪ್ಪ ಗ್ರಾಮದಲ್ಲಿ ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಚೀಟಿ ಬರೆಯುತ್ತಿದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಚರಂಡಿಗೆ ಉರುಳಿದ ಬೈಕ್, ಓರ್ವ ಸಾವು
ಕುಂಸಿ : ಸಮೀಪದ ಹಾಲ್ಕುಣಿ ಗ್ರಾಮದ ಮುಖ್ಯರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬೈಕ್‌ವೊಂದು ಚರಂಡಿಗೆ ಉರುಳಿದೆ. ಘಟನೆಯಲ್ಲಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸಮೀಪದ ದೇವರಹಳ್ಳಿ ಗ್ರಾಮದ ರಾಜು (38) ಮೃತರು. ಚೋರಡಿಯಿಂದ ದೇವರಹಳ್ಳಿಗೆ ಹೋಗುತ್ತಿದ್ದಾಗ ಅಪಘಾತವಾಗಿದೆ. ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಸರ್ಕಾರಿ ನೌಕರರ ಸಂಘದ ಚುನಾವಣೆ, ಫಲಿತಾಂಶ ಪ್ರಕಟ, ಷಡಾಕ್ಷರಿ ಬಣಕ್ಕೆ ಭರ್ಜರಿ ಗೆಲುವು
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200