ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | BULLET | 3 ಜೂನ್ 2022
ರೌಡಿಯೊಬ್ಬನ ಕಾಲಿಗೆ ಶಿವಮೊಗ್ಗ ಪೊಲೀಸರು ಗುಂಡು ಹಾರಿಸಿದ್ದಾರೆ. ದರೋಡೆಗೆ ಹೊಂಚು ಹಾಕಿದ್ದ ವೇಳೆ ಪೊಲೀಸರು ದಾಳಿ ನಡೆಸಿದಾಗ, ರೌಡಿ ಪ್ರತಿದಾಳಿ ನಡೆಸಿದ್ದಾನೆ. ಈ ವೇಳೆ ಪೊಲೀಸರು ರೌಡಿಯ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ತಿಳಿದು ಬಂದಿದೆ.
ಶಿವಮೊಗ್ಗದ ಅನುಪಿನಕಟ್ಟೆ ಬಳಿ ಇವತ್ತು ಬೆಳಗ್ಗೆ ಘಟನೆ ಸಂಭವಿಸಿದೆ. ರೌಡಿ ಅರ್ಷದ್ ಖಾನ್ (24), ದರೋಡೆಗೆ ಹೊಂಚು ಹಾಕಿದ್ದ. ಖಚಿತ ಮಾಹಿತಿ ಮೇರೆಗೆ ತುಂಗಾ ನಗರ ಠಾಣೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ರೌಡಿ ಅರ್ಷದ್ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ.
ಎಚ್ಚರಿಕೆ ನೀಡಿದರೂ ದಾಳಿ ನಡೆಸಿದ ರೌಡಿ ಅರ್ಷದ್ ಖಾನ್ ಕಾಲಿಗೆ ತುಂಗಾ ನಗರ ಠಾಣೆ ಇನ್ಸ್ ಪೆಕ್ಟರ್ ಮಂಜುನಾಥ್ ಗುಂಡು ಹಾರಿಸಿದ್ದಾರೆ. ಗಾಯಗೊಂಡಿದ್ದ ರೌಡಿ ಅರ್ಷದ್’ನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅರ್ಷದ್ ಖಾನ್ ಚಾಕು ಹಿಡಿದು ದರೋಡೆ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ. ತುಂಗಾ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ – ರಾಗಿಗುಡ್ಡದಲ್ಲಿ 8 ಭಾರಿ ಸ್ಪೋಟ ಕೇಸ್, ಡಿಸಿ ಕಚೇರಿಗೆ ಸ್ಥಳೀಯರ ದೌಡು
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422