SHIVAMOGGA LIVE | 5 JUNE 2023
SHIMOGA : ಕೊಲೆ ಪ್ರಕರಣದ ಆರೋಪಿಯನ್ನು ವಶಕ್ಕೆ ಪಡೆಯಲು ತೆರಳಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಯಾಗಿದೆ. ಈ ವೇಳೆ ಪೊಲೀಸರು ಆರೋಪಿಯ ಕಾಲಿಗೆ ಗುಂಡು (Fired) ಹಾರಿಸಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಆಯನೂರು ಬಾರ್ನಲ್ಲಿ ಕಳೆದ ರಾತ್ರಿ ಕ್ಯಾಶಿಯರ್ಗೆ ಚಾಕು ಚುಚ್ಚಿ ಹತ್ಯೆ ಮಾಡಲಾಗಿತ್ತು. ಪ್ರಕರಣದ ಪ್ರಮುಖ ಆರೋಪಿ ಸತೀಶ್ ಎಂಬಾತನನ್ನು ಪೊಲೀಸರು ಬಂಧಿಸಲು ತೆರಳಿದ್ದರು. ಈ ವೇಳೆ ಪೊಲೀಸ್ ಸಿಬ್ಬಂದಿ ಪ್ರವೀಣ್ ಮತ್ತು ಶಿವರಾಜ್ ಅವರು ಆರೋಪಿ ಸತೀಶನನ್ನು ಹಿಡಿಯಲು ಯತ್ನಿಸಿದ್ದಾರೆ. ಆಗ ಸತೀಶ ಪೊಲೀಸ್ ಸಿಬ್ಬಂದಿ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ – ಆಯನೂರಿನಲ್ಲಿ ಮಧ್ಯರಾತ್ರಿ ಕೊಲೆ, ಎದೆಗೆ ಡ್ರ್ಯಾಗರ್ ಚುಚ್ಚಿ ವ್ಯಕ್ತಿ ಹತ್ಯೆ, ಕಾರಣವೇನು? ಹೇಗಾಯ್ತು ಘಟನೆ?
ಈ ವೇಳೆ ಪಿಎಸ್ಐ ಅವರು ಗಾಳಿಯಲ್ಲಿ ಗುಂಡು ಹಾರಿಸಿ ಸತೀಶನಿಗೆ ಎಚ್ಚರಿಕೆ ನೀಡಿದ್ದಾರೆ. ಹೀಗಿದ್ದೂ ಸತೀಶ ಪಿಎಸ್ಐ ಮೇಲೆ ಚಾಕುವಿನಿಂದ ದಾಳಿಗೆ ಮುಂದಾಗಿದ್ದ. ಆಗ ಸಬ್ ಇನ್ಸ್ಪೆಕ್ಟರ್ ಹಾರಿಸಿದ ಗುಂಡು ಸತೀಶನ ಕಾಲಿಗೆ ತಗುಲಿದೆ. ಸತೀಶ ಮತ್ತು ಗಾಯಗೊಂಡ ಪೊಲೀಸ್ ಸಿಬ್ಬಂದಿಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ- ಶಿವಮೊಗ್ಗದ ಫ್ರೀಡಂ ಪಾರ್ಕ್ನಲ್ಲಿ 3 ದಿನ ಫಲಪುಷ್ಪ ಪ್ರದರ್ಶನ, ಈ ವರ್ಷದ ವಿಶೇಷತೆ ಏನು?
- 2022ರಲ್ಲಿ ಅಪ್ಲೋಡ್ ಆಗಿದ್ದ ವಿಡಿಯೋ, ಶಿವಮೊಗ್ಗದ ಯುವಕನಿಗೆ ಈಗ ಶುರು ಸಂಕಷ್ಟ
- ಅಡಿಕೆ ಧಾರಣೆ | 22 ಜನವರಿ 2025 | ಇವತ್ತು ಯಾವ್ಯಾವ ಅಡಿಕೆ ಎಷ್ಟಿದೆ ರೇಟ್?
- ಸೈನ್ಸ್ ಮೈದಾನ, ಸಂಜೆ ಪಾರ್ಕಿಂಗ್ ಸ್ಥಳಕ್ಕೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ
- ಇನ್ಮುಂದೆ ಕಾಗೋಡು ತಿಮ್ಮಪ್ಪ, ಡಾಕ್ಟರ್ ಕಾಗೋಡು ತಿಮ್ಮಪ್ಪ
- ಕುವೆಂಪು ವಿವಿ, 84 ವಿದ್ಯಾರ್ಥಿಗಳಿಗೆ ಚಿನ್ನದ ಪದಕ, ಹೇಗಿತ್ತು 34ನೇ ಘಟಿಕೋತ್ಸವ?