BREAKING NEWS – ಆಯನೂರಿನಲ್ಲಿ ಕೊಲೆ, ಆರೋಪಿ ಕಾಲಿಗೆ ಗುಂಡು ಹೊಡೆದ ಪೊಲೀಸ್‌, ಹೇಗಾಯ್ತು ಘಟನೆ?

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

SHIVAMOGGA LIVE | 5 JUNE 2023

SHIMOGA : ಕೊಲೆ ಪ್ರಕರಣದ ಆರೋಪಿಯನ್ನು ವಶಕ್ಕೆ ಪಡೆಯಲು ತೆರಳಿದ್ದ ಪೊಲೀಸ್‌ ಸಿಬ್ಬಂದಿ ಮೇಲೆ ಹಲ್ಲೆಯಾಗಿದೆ. ಈ ವೇಳೆ ಪೊಲೀಸರು ಆರೋಪಿಯ ಕಾಲಿಗೆ ಗುಂಡು (Fired) ಹಾರಿಸಿದ್ದು, ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಆಯನೂರು ಬಾರ್‌ನಲ್ಲಿ ಕಳೆದ ರಾತ್ರಿ ಕ್ಯಾಶಿಯರ್‌ಗೆ ಚಾಕು ಚುಚ್ಚಿ ಹತ್ಯೆ ಮಾಡಲಾಗಿತ್ತು. ಪ್ರಕರಣದ ಪ್ರಮುಖ ಆರೋಪಿ ಸತೀಶ್‌ ಎಂಬಾತನನ್ನು ಪೊಲೀಸರು ಬಂಧಿಸಲು ತೆರಳಿದ್ದರು. ಈ ವೇಳೆ ಪೊಲೀಸ್‌ ಸಿಬ್ಬಂದಿ ಪ್ರವೀಣ್‌ ಮತ್ತು ಶಿವರಾಜ್‌ ಅವರು ಆರೋಪಿ ಸತೀಶನನ್ನು ಹಿಡಿಯಲು ಯತ್ನಿಸಿದ್ದಾರೆ. ಆಗ ಸತೀಶ ಪೊಲೀಸ್‌ ಸಿಬ್ಬಂದಿ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ – ಆಯನೂರಿನಲ್ಲಿ ಮಧ್ಯರಾತ್ರಿ ಕೊಲೆ, ಎದೆಗೆ ಡ್ರ್ಯಾಗರ್‌ ಚುಚ್ಚಿ ವ್ಯಕ್ತಿ ಹತ್ಯೆ, ಕಾರಣವೇನು? ಹೇಗಾಯ್ತು ಘಟನೆ?

ಈ ವೇಳೆ ಪಿಎಸ್‌ಐ ಅವರು ಗಾಳಿಯಲ್ಲಿ ಗುಂಡು ಹಾರಿಸಿ ಸತೀಶನಿಗೆ ಎಚ್ಚರಿಕೆ ನೀಡಿದ್ದಾರೆ. ಹೀಗಿದ್ದೂ ಸತೀಶ ಪಿಎಸ್‌ಐ ಮೇಲೆ ಚಾಕುವಿನಿಂದ ದಾಳಿಗೆ ಮುಂದಾಗಿದ್ದ. ಆಗ ಸಬ್‌ ಇನ್ಸ್‌ಪೆಕ್ಟರ್‌ ಹಾರಿಸಿದ ಗುಂಡು ಸತೀಶನ ಕಾಲಿಗೆ ತಗುಲಿದೆ. ಸತೀಶ ಮತ್ತು ಗಾಯಗೊಂಡ ಪೊಲೀಸ್‌ ಸಿಬ್ಬಂದಿಯನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

Leave a Comment