SHIVAMOGGA LIVE NEWS
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ| ಗಾಂಧಿ ಬಜಾರ್ ತರಕಾರಿ ಮಾರುಕಟ್ಟೆ ಬಳಿ ಯುವಕನಿಗೆ ಚಾಕು ಇರಿದ ಪ್ರಕರಣದ ಆರೋಪಿಗೆ ಪೊಲೀಸರು ಗುಂಡು (FIRING) ಹಾರಿಸಿ ಬಂಧಿಸಿದ್ದಾರೆ.
.png)
ಮಾರ್ನಮಿ ಬೈಲಿನ ಮೊಹಮ್ಮದ್ ಜಬೀ ಅಲಿಯಾಸ್ ಚರ್ಬಿ (30) ಎಂಬಾತನ ಕಾಲಿಗೆ ಗುಂಡು ಹಾರಿಸಲಾಗಿದೆ. ಶಿವಮೊಗ್ಗದ ಎನ್.ಟಿ.ರಸ್ತೆಯ ಫಲಕ್ ಪ್ಯಾಲಸ್ ಬಳಿ ಬೆಳಗಿನ ಜಾವ ಘಟನೆ ಸಂಭವಿಸಿದೆ.
ಹೇಗಾಯ್ತು ಘಟನೆ?
ಆ.15ರಂದು ಗಾಂಧಿ ಬಜಾರ್ ತರಕಾರಿ ಮಾರುಕಟ್ಟೆ ಬಳಿ ಪ್ರೇಮ ಸಿಂಗ್ (20) ಎಂಬಾತನ ಹೊಟ್ಟೆಗೆ ಚಾಕು ಇರಿಯಲಾಗಿತ್ತು. ಘಟನೆ ಸಂಬಂಧ ಆರೋಪಿಗಳನ್ನು ಬಂಧಿಸಲು ಪೊಲೀಸರು ಬಂಧಿಸಲು ಮುಂದಾಗಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ವ್ಯಕ್ತಿಗೆ ಚಾಕು ಇರಿತ
ಇವತ್ತು ಬೆಳಗಿನ ಜಾವ ಮೊಹಮ್ಮದ್ ಜಬೀ ಅಲಿಯಾಸ್ ಚರ್ಬಿಯನ್ನು ಪೊಲೀಸರು ಬಂಧಿಸಲು ಮುಂದಾಗಿದ್ದಾರೆ. ಈ ವೇಳೆ ಪೊಲೀಸ್ ಸಿಬ್ಬಂದಿ ಮೇಲೆಯೇ ಚಾಕುವಿನಿಂದ ಇರಿಯಲು ಆತ ಮುಂದಾಗಿದ್ದಾನೆ. ಹಾಗಾಗಿ ವಿನೋಬನಗರ ಠಾಣೆ ಪಿಎಸ್ಐ ಮಂಜುನಾಥ ಎಸ್.ಕುರಿ ಅವರು ಪಿಸ್ತೂಲಿನಿಂದ ಗುಂಡು ಹಾರಿಸಿದ್ದಾರೆ. ಮೊಹಮ್ಮದ್ ಜಬೀ ಬಲಗಾಲಿಗೆ ಗುಂಡು ತಗುಲಿದೆ. ಆತನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅಲ್ಲದೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಮುಂದಾಗಿದ್ದರಿಂದ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಇನ್ನಿಬ್ಬರು ಆರೋಪಿಗಳು ಆರೆಸ್ಟ್
ಪ್ರೇಮ್ ಸಿಂಗ್’ಗೆ ಚಾಕು ಇರಿತ ಪ್ರಕರಣ ಸಂಬಂಧ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜೆ.ಸಿ.ನಗರದ ನದೀಮ್ (25) ಮತ್ತು ಬುದ್ಧಾ ನಗರದ ಅಬ್ದುಲ್ ರೆಹಮಾನ್ (25) ಎಂಬ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ.
ದೊಡ್ಡಪೇಟೆ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ, ಭದ್ರಾವತಿ ಪಟ್ಟಣದ ಶಾಲೆ, ಕಾಲೇಜಿಗೆ ರಜೆ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ರಾಜ್ಯವನ್ನೇ ಬೆಚ್ಚಿಬೀಳಿಸಿದ ಶಿವಮೊಗ್ಗದ ಡ್ರೈವರ್, 19 ಅಕೌಂಟ್, 25 ATM ಕಾರ್ಡ್, ₹55 ಕೋಟಿ ನಷ್ಟ, ಏನಿದು ಕೇಸ್?

- ಭದ್ರಾವತಿಯಲ್ಲಿ ಸಬ್ ಇನ್ಸ್ಪೆಕ್ಟರ್ಗಳ ಕಾಲಿನ ಮೂಳೆ, ಕೈ ಬೆರಳು ಕಟ್, ಆರೋಪಿ ಕಾಲಿಗೆ ಗುಂಡೇಟು

- ಶಿವಮೊಗ್ಗ ಜಿಲ್ಲೆಯಲ್ಲಿ ಮೈ ಸುಡುವ ಬಿಸಿಲಿನ ಜೊತೆಗೆ ಮೈ ನಡುಗಿಸುವ ಚಳಿ, ಇವತ್ತಿನ ಹವಾಮಾನ ವರದಿ

- ಶಿವಮೊಗ್ಗ ತಾಲೂಕಿನ ಹಲವೆಡೆ ಫೆಬ್ರವರಿ 8, 9 ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ನಂಜಪ್ಪ ಆಸ್ಪತ್ರೆಯಲ್ಲಿ ನಡುರಾತ್ರಿ ಚಿರತೆಗೆ ಸ್ಕ್ಯಾನಿಂಗ್, ಏನಿದು? ಹೇಗೆ ನಡೆಯಿತು ಪ್ರಕ್ರಿಯೆ?

About The Editor
ನಿತಿನ್ ಆರ್.ಕೈದೊಟ್ಲು






