ಪೊಲೀಸ್, ಅರಣ್ಯ ಇಲಾಖೆ ಜಂಟಿ ಕಾರ್ಯಾಚರಣೆ, ಒಬ್ಬ ಅರೆಸ್ಟ್, ಪರವಾನಗಿ ಇಲ್ಲದ ಬಂದೂಕು ವಶಕ್ಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SAGARA NEWS |  29 ಡಿಸೆಂಬರ್ 2021

ಅರಣ್ಯ ಇಲಾಖೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಶ್ರೀಗಂಧ, ಬೀಟೆ ತುಂಡುಗಳು ಮತ್ತು ಪರವಾನಗಿ ಇಲ್ಲದ ಒಂದು ಬಂದೂಕನ್ನು ವಶಕ್ಕೆ ಪಡೆದಿದ್ದಾರೆ. ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ.

AVvXsEgvkqR5na6VBgyQ7GpgkZA0SK3TnlX05prWtKfmX8meEFOtOAl

ತಾಲೂಕಿನ ಚಿಪ್ಳಿ-ಲಿಂಗದಹಳ್ಳಿ ವ್ಯಾಪ್ತಿಯ ಅರಣ್ಯ ವಲಯದಲ್ಲಿ ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಪುರುಷೋತ್ತಮ್ ಎಂಬುವನನ್ನು ಬಂಧಿಸಿ ಬೀಟೆ ಮತ್ತು ಶ್ರೀಗಂಧದ ತುಂಡುಗಳು ಹಾಗೂ ಪರವಾನಗಿ ಇಲ್ಲದ ಬಂದೂಕು ವಶಕ್ಕೆ ಪಡೆದಿದ್ದಾರೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅರಣ್ಯ ಇಲಾಖೆ ಅಧಿಕಾರಿ ಮೋಹನ್‌ಕುಮಾರ್‌ ಮಾರ್ಗದರ್ಶನದಲ್ಲಿ, ವಲಯ ಅರಣ್ಯಾಧಿಕಾರಿ ಪ್ರಮೋದ್ ಡಿ.ಆರ್. ಸಹಕಾರದೊಂದಿಗೆ ನಡೆದ ಕಾರ್ಯಾಚರಣೆಯಲ್ಲಿ ಗ್ರಾಮಾಂತರ ಠಾಣಿ ಸಿಪಿಐ ಗಿರೀಶ್ ಮತ್ತು ಎಸಿಎಫ್ ಶ್ರೀಧರ್, ಅರಣ್ಯ ರಕ್ಷಕರಾದ ಪ್ರದೀಪ್, ಶಿವಾನಂದ್, ಸುಮಿತಾ, ಲೋಕೇಶ್ ದಾಳಿಯಲ್ಲಿ ಪಾಲ್ಗೊಂಡಿದ್ದರು.

ABOUT ME NEW FINAL FINAL

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment