ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಕೇಸ್, 12 ಮಂದಿ ಪೊಲೀಸ್ ವಶಕ್ಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಫೆಬ್ರವರಿ 2022

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ 12 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.

Shimoga Nanjappa Hospital Health Package

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಪ್ರಕರಣ ಸಂಬಂಧ 3 ಆರೋಪಿಗಳನ್ನು ಬಂಧಿಸಲಾಗಿದೆ. 12 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಅವರು ಪ್ರಕರಣದಲ್ಲಿ ಭಾಗಿಯಾಗಿರುವುದು ದೃಢವಾದರೆ ಬಂಧಿಸಲಾಗುತ್ತದೆ. ಅಲ್ಲದೆ ಈ ಪ್ರಕರಣದ ಹಿಂದೆ ಯಾರಿದ್ದಾರೆ ಅನ್ನುವುದನ್ನು ಪತ್ತೆ ಹಚ್ಚಲಾಗುತ್ತದೆ ಎಂದು ತಿಳಿಸಿದರು.

ಸದ್ಯ ಶಿವಮೊಗ್ಗ ನಗರ ಶಾಂತಿಯುತವಾಗಿದೆ. ಪೊಲೀಸರು ಬಂದೋಬಸ್ತ್ ಕೈಗೊಂಡಿದ್ದಾರೆ. ಇನ್ನು, ಹರ್ಷ ಅಂತಿಮ ಯಾತ್ರೆ ವೇಳೆ ಕಲ್ಲು ತೂರಾಟ ನಡೆಸಿದವರ ವಿರುದ್ಧವು ಪ್ರಕರಣ ದಾಖಲಿಸಲಾಗುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ | ಹರ್ಷ ಅಂತಿಮ ಯಾತ್ರೆ ವೇಳೆ ಸಚಿವರು, ಪೊಲೀಸರ ಎದುರಲ್ಲೇ ಕಲ್ಲು ತೂರಾಟ

ಇದನ್ನೂ ಓದಿ | ಹರ್ಷ ಹತ್ಯೆ ಪ್ರಕರಣ, ಇಬ್ಬರು ಆರೋಪಿಗಳ ಹೆಸರು ಪ್ರಕಟಿಸಿದ ಪೊಲೀಸರು

Shimoga Live Website country wise Reach

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment