ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಸೆಪ್ಟೆಂಬರ್ 2021
ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ನಾಪತ್ತೆ ಪ್ರಕರಣದ ತನಿಖೆ ಮತ್ತಷ್ಟು ಬಿರುಸುಗೊಂಡಿದೆ. ಶಿವಮೊಗ್ಗದಿಂದ ತೆರಳುವ ಮೊದಲು ಹಣ ಡ್ರಾ ಮಾಡಿಕೊಂಡಿರುವುದು ತನಿಖೆಗೆ ಟ್ವಿಸ್ಟ್ ನೀಡಿದೆ.
ಇದನ್ನು ಓದಿ | ಡಿಸಿ ಕಚೇರಿ ಸಿಬ್ಬಂದಿ ಕಣ್ಮರೆಯಾಗಿ 24 ಗಂಟೆ, ಮೊಬೈಲ್ ಸಿಗ್ನಲ್ ಕೊನೆಯಾದಾಗಿ ಸಿಕ್ಕ ಸ್ಥಳದಲ್ಲಿ ಶೋಧ, ಈವರೆಗೂ ಏನೆಲ್ಲ ಆಗಿದೆ?
ಎಫ್.ಡಿ.ಎ ಗಿರಿರಾಜ್ ಪತ್ತೆಗೆ ಶಿವಮೊಗ್ಗ ಪೊಲೀಸರು ಮೂರು ದಿಕ್ಕಿನಲ್ಲಿ ತನಿಖೆ ಕೈಗೊಂಡಿದ್ದಾರೆ. ತನಿಖೆ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ಅವರು ತನಿಖೆ ಕುರಿತು ಮಾಹಿತಿ ನೀಡಿದ್ದಾರೆ.
ತನಿಖೆ ದಿಕ್ಕು 1
ಗಿರಿರಾಜ್ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿ ನಾಪತ್ತೆಯಾಗಿದ್ದಾರೆ. ಅವರ ಮೊಬೈಲ್ ಸಿಗ್ನಲ್ ಕೊನೆಯದಾಗಿ ಸಿಕ್ಕ ಕಡೆಯಲ್ಲಿ ತಲಾಷ್ ನಡೆಸಲಾಗುತ್ತಿದೆ. ‘ಅವರು ಸೂಸೈಡ್ ಮಾಡಿಕೊಳ್ಳುವುದಾಗಿ ತಿಳಿಸಿರುವುದರಿಂದ ಭದ್ರಾ ನದಿಯಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಹೊಳೆಹೊನ್ನೂರಿನಲ್ಲೂ ಹುಡಕಾಟ ಮಾಡಲಾಗುತ್ತಿದೆ’ ಎಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ತಿಳಿಸಿದ್ದಾರೆ.
ತನಿಖೆ ದಿಕ್ಕು 2
ಗಿರಿರಾಜ್ ಬೇರೆ ಎಲ್ಲಿಯಾದರೂ ಹೋಗಿರಬಹುದೆ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಕುರಿತು ಅವರ ಕುಟುಂಬದವರು, ಸ್ನೇಹಿತರು, ಸಹೋದ್ಯೋಗಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಬಸ್ ನಿಲ್ದಾಣ, ರೈಲ್ವೆ ನಿಲ್ದಾಣದಲ್ಲಿಯೂ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ‘ಅವರು ಬೇರೆ ಊರಿಗೆ ಹೋಗಿದ್ದಾರೆಯೇ ಎಂಬುದರ ಕೂಡ ತನಿಖೆ ಮಾಡುತ್ತಿದ್ದೇವೆ’ ಎಂದು ಎಸ್ಪಿ ಲಕ್ಷ್ಮೀಪ್ರಸಾದ್ ತಿಳಿಸಿದ್ದಾರೆ.
ತನಿಖೆ ದಿಕ್ಕು 3
ಗಿರಿರಾಜ್ ಅವರ ಬ್ಯಾಂಕ್ ಖಾತೆ ಪ್ರಕರಣದ ತನಿಖೆಗೆ ಟ್ವಿಸ್ಟ್ ನೀಡಿದೆ. ಗಿರಿರಾಜ್ ಅವರು ನಾಪತ್ತೆಯಾದ ದಿನ ಎಟಿಎಂನಿಂದ ಹಣ ಬಿಡಿಸಿಕೊಂಡಿದ್ದಾರೆ. ಪೊಲೀಸ್ ತನಿಖೆ ವೇಳೆ ಇದು ತಿಳಿದು ಬಂದಿದೆ. ಹಣ ಬಿಡಿಸಲು ಕಾರಣವೇನು ಅನ್ನುವ ಕುರಿತು ತನಿಖೆ ನಡೆಸುತ್ತಿದ್ದಾರೆ.
ಗಿರಿರಾಜ್ ಶೀಘ್ರ ಪತ್ತೆಯಾಗಬಹದು ಎಂಬ ನಿರೀಕ್ಷೆ ಪೊಲೀಸ್ ಇಲಾಖೆಯದ್ದಾಗಿದೆ. ಇನ್ನು, ಗಿರಿರಾಜ್ ಅವರು ಸುರಕ್ಷಿತವಾಗಿ ಹಿಂತಿರುಗಲಿ ಎಂದು ಸಹೋದ್ಯೋಗಿಗಳು ಪ್ರಾರ್ಥಿಸಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422