ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 19 JUNE 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
BHADRAVATHI : ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಭದ್ರಾವತಿಯ ಟೌನ್ ಅನ್ವರ್ ಕಾಲೋನಿಯ ಮೋಮಿನ್ ಮೊಹಲ್ಲಾದ ಸಾಬೀತ್ ( 23) ಎಂಬಾತನನ್ನು ಪೊಲೀಸರು (Police) ಬಂಧಿಸಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಸಾಬೀತ್ ಎಂಬಾತ ಕಾರು ನಿಲ್ಲಿಸಿಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಆರೋಪಿಯಿಂದ 28 ಸಾವಿರ ರೂ. ಮೌಲ್ಯದ 1 ಕೆಜಿ 135 ಗ್ರಾಂ ತೂಕದ ಒಣ ಗಾಂಜಾ ಹಾಗೂ 6 ಸಾವಿರ ರೂ. ನಗದು, ಕೃತ್ಯಕ್ಕೆ ಬಳಸಿದ ಕಾರನ್ನು ವಶಕ್ಕೆ ಪಡೆಯಲಾಗಿದೆ. ಭದ್ರಾವತಿ ಡಿವೈಎಸ್‌ಪಿ ನಾಗರಾಜ್, ಭದ್ರಾವತಿ ಇನ್ಸ್‌ಪೆಕ್ಟರ್ ಶ್ರೀಶೈಲ್, ಹಳೆನಗರ ಠಾಣೆ ಪಿಎಸ್‌ಐ ಶರಣಪ್ಪ.ಹೆಚ್ ನೇತೃತ್ವದಲ್ಲಿ ಸಿಬ್ಬಂದಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಹಳೆನಗರ ಠಾಣೆ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿಕಾರಿಪುರದಲ್ಲಿ ನಟ ದರ್ಶನ್ ವಿರುದ್ಧ ಆಕ್ರೋಶ, ಮಾನವ ಸರಪಳಿ