ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 9 JULY 2024
SHIMOGA : ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡಿ ಹೊಡೆಯಲಾಗಿದೆ. ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ತ್ಯಾಜ್ಯವಳ್ಳಿ ಅರಣ್ಯ ಪ್ರದೇಶದಲ್ಲಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ಆರೋಪಿ ರಜಾಕ್ ಎಂಬಾತ ಗುಂಡೇಟಿನಿಂದ ಗಾಯಗೊಂಡಿದ್ದಾನೆ.
ವಿನೋಬನಗರ ಪೊಲೀಸ್ ಠಾಣೆಯಲ್ಲಿ ರಜಾಕ್ ವಿರುದ್ಧ ಕೊಲೆ ಯತ್ನ, ಎನ್ಡಿಪಿಎಸ್ ಕಾಯ್ದೆ ಅಡಿ ಐದು ಪ್ರಕರಣಗಳಿದ್ದವು. ತಲೆಮರೆಸಿಕೊಂಡಿದ್ದ ರಜಾಕ್ ಕುರಿತು ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಹೊಳೆಹೊನ್ನೂರು ಠಾಣೆ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಆತನ ಬಂಧನಕ್ಕೆ ವಿಶೇಷ ತಂಡ ತೆರಳಿದ್ದಾಗ ಘಟನೆ ಸಂಭವಿಸಿದೆ.

ಪೊಲೀಸ್ ಸಿಬ್ಬಂದಿ ಅರ್ಜುನ್ ಮೇಲೆ ಆರೋಪಿ ರಜಾಕ್ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಅರ್ಜುನ್ ಗಾಯಗೊಂಡ ಹಿನ್ನೆಲೆ ಹೊಳೆಹೊನ್ನೂರು ಠಾಣೆ ಇನ್ಸ್ಪೆಕ್ಟರ್ ಲಕ್ಷ್ಮಿಪತಿ ಅವರು ಆತ್ಮರಕ್ಷಣೆಗಾಗಿ ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದ್ದಾರೆ. ಆದರೂ ದಾಳಿ ಮುಂದುವರೆಸಿ, ಪರಾರಿಯಾಗಲು ಯತ್ನಿಸಿದ ಹಿನ್ನೆಲೆ ರಜಾಕ್ ಕಾಲಿಗೆ ಗುಂಡು ಹಾರಿಸಲಾಗಿದೆ. ಗಾಯಾಳ ಪೊಲೀಸ್ ಸಿಬ್ಬಂದಿ ಅರ್ಜುನ್ ಮತ್ತು ಆರೋಪಿ ರಜಾಕ್ನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾಧ್ಯಮಗಳಿಗೆ ವಾಟ್ಸಪ್ ಮೂಲಕ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ, ಚಿಕ್ಕಮಗಳೂರಿಗೆ ಇವತ್ತು ಯಲ್ಲೋ ಅಲರ್ಟ್, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ ತಾಪಮಾನ?
LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು






