BREAKING NEWS – ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸ್‌, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 9 JULY 2024

SHIMOGA : ಪೊಲೀಸ್‌ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡಿ ಹೊಡೆಯಲಾಗಿದೆ. ಕುಂಸಿ ಪೊಲೀಸ್‌ ಠಾಣೆ ವ್ಯಾಪ್ತಿಯ ತ್ಯಾಜ್ಯವಳ್ಳಿ ಅರಣ್ಯ ಪ್ರದೇಶದಲ್ಲಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ಆರೋಪಿ ರಜಾಕ್‌ ಎಂಬಾತ ಗುಂಡೇಟಿನಿಂದ ಗಾಯಗೊಂಡಿದ್ದಾನೆ.

ವಿನೋಬನಗರ ಪೊಲೀಸ್‌ ಠಾಣೆಯಲ್ಲಿ ರಜಾಕ್‌ ವಿರುದ್ಧ ಕೊಲೆ ಯತ್ನ, ಎನ್‌ಡಿಪಿಎಸ್‌ ಕಾಯ್ದೆ ಅಡಿ ಐದು ಪ್ರಕರಣಗಳಿದ್ದವು. ತಲೆಮರೆಸಿಕೊಂಡಿದ್ದ ರಜಾಕ್‌ ಕುರಿತು ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಹೊಳೆಹೊನ್ನೂರು ಠಾಣೆ ಇನ್ಸ್‌ಪೆಕ್ಟರ್‌ ನೇತೃತ್ವದಲ್ಲಿ ಆತನ ಬಂಧನಕ್ಕೆ ವಿಶೇಷ ತಂಡ ತೆರಳಿದ್ದಾಗ ಘಟನೆ ಸಂಭವಿಸಿದೆ.

Police-Jeep-at-Shimoga-General-Image

ಪೊಲೀಸ್‌ ಸಿಬ್ಬಂದಿ ಅರ್ಜುನ್‌ ಮೇಲೆ ಆರೋಪಿ ರಜಾಕ್‌ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಅರ್ಜುನ್‌ ಗಾಯಗೊಂಡ ಹಿನ್ನೆಲೆ ಹೊಳೆಹೊನ್ನೂರು ಠಾಣೆ ಇನ್ಸ್‌ಪೆಕ್ಟರ್‌ ಲಕ್ಷ್ಮಿಪತಿ ಅವರು ಆತ್ಮರಕ್ಷಣೆಗಾಗಿ ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದ್ದಾರೆ. ಆದರೂ ದಾಳಿ ಮುಂದುವರೆಸಿ, ಪರಾರಿಯಾಗಲು ಯತ್ನಿಸಿದ ಹಿನ್ನೆಲೆ ರಜಾಕ್‌ ಕಾಲಿಗೆ ಗುಂಡು ಹಾರಿಸಲಾಗಿದೆ. ಗಾಯಾಳ ಪೊಲೀಸ್‌ ಸಿಬ್ಬಂದಿ ಅರ್ಜುನ್‌ ಮತ್ತು ಆರೋಪಿ ರಜಾಕ್‌ನನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಮಾಧ್ಯಮಗಳಿಗೆ ವಾಟ್ಸಪ್‌ ಮೂಲಕ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ, ಚಿಕ್ಕಮಗಳೂರಿಗೆ ಇವತ್ತು ಯಲ್ಲೋ ಅಲರ್ಟ್‌, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ ತಾಪಮಾನ?

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment