ಶಿವಮೊಗ್ಗದಲ್ಲಿ ರೌಡಿಶೀಟರ್‌ ಕಾಲಿಗೆ ಗುಂಡು ಹಾರಿಸಿದ ಪೊಲೀಸ್‌, ಯಾರದು ರೌಡಿ ಶೀಟರ್‌? ಆಗಿದ್ದೇನು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ: ನಗರದಲ್ಲಿ ಇತ್ತೀಚೆಗೆ ನಡೆದ ಅಮ್ಜದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರೌಡಿಶೀಟರ್‌ (Rowdy Sheeter) ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆರೋಪಿಯನ್ನು ಬಂಧಿಸಲು ತೆರಳಿದ್ದಾಗ ಆತ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಕಾರಣ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ರೌಡಿಶೀಟರ್‌ ಅಕ್ಬರ್‌ (21) ಕಾಲಿಗೆ ಗುಂಡು ತಗುಲಿದ್ದು, ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಶಿವಮೊಗ್ಗ ನಗರ ಹೊರವಲಯದ ಪುರಲೆ ಬಳಿ ನಡೆದಿದೆ. ನ್ಯೂಮಂಡ್ಲಿಯ ನಿವಾಸಿ ಅಕ್ಬರ್ ಮೇಲೆ ಈಗಾಗಲೇ ನಾಲ್ಕಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಅಮ್ಜದ್ ಕೊಲೆ ಪ್ರಕರಣದಲ್ಲಿ ಸಹ ಆತ ಆರೋಪಿಯಾಗಿದ್ದಾನೆ.

ಪೊಲೀಸರ ಮೇಲೆಯೇ ಹಲ್ಲೆ ಯತ್ನ

ಅಮ್ಜದ್ ಕೊಲೆ ಆರೋಪಿ ಅಕ್ಬರ್‌ನನ್ನು ಬಂಧಿಸಲು ದೊಡ್ಡಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿದ್ದರು. ದೊಡ್ಡಪೇಟೆ ಠಾಣೆ ಪಿಎಸ್ಐ ಮಂಜುನಾಥ್ ಅವರು ಅಕ್ಬರ್‌ಗೆ ಶರಣಾಗುವಂತೆ ಸೂಚಿಸಿದ್ದಾರೆ. ಈ ವೇಳೆ ಅಕ್ಬರ್‌ ಪೊಲೀಸ್ ಸಿಬ್ಬಂದಿ ಚಂದ್ರನಾಯ್ಕ್ ಅವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ ಎನ್ನಲಾಗಿದೆ.

ಪಿಎಸ್ಐ ಮಂಜುನಾಥ್ ಮೊದಲು ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗತಿಗೆ ಸೂಚಿಸಿದ್ದರು. ಅವರ ಮಾತು ಧಿಕ್ಕರಿಸಿದ ಅಕ್ಬರ್ ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ತಿಳಿದು ಬಂದಿದೆ.

Police-Jeep-in-Shimoga-city

ಗಾಯಗೊಂಡ ರೌಡಿಶೀಟರ್ ಅಕ್ಬರ್‌ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸ್ ಸಿಬ್ಬಂದಿ ಚಂದ್ರನಾಯ್ಕ್‌ ಅವರನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಎನ್‌.ಹೆಚ್‌.ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗ ಏರ್‌ಪೋರ್ಟ್‌ ಬಳಿ ಶಾಪಿಂಗ್‌ ಮಾಲ್‌, ಹೊಟೇಲ್‌, KSIIDC ಅಧ್ಯಕ್ಷರು ಏನೆಲ್ಲ ಹೇಳಿದರು? ಇಲ್ಲಿದೆ ಹೈಲೈಟ್ಸ್‌

Rowdy Sheeter

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment