ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಲಾಂಗು, ಚಾಕು ಪ್ರದರ್ಶನ

SHIMOGA NEWS, 9 OCTOBER 2024 : ಮೆಗ್ಗಾನ್‌ ಆಸ್ಪತ್ರೆ (Mc Gann Hospital) ಆವರಣದಲ್ಲಿ ಲಾಂಗ್‌ ಮತ್ತು ಚಾಕು ತೋರಿಸಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಮೊಹಮ್ಮದ್‌ ಗೌಸ್‌ ಮತ್ತು ಅಯಾನ್‌ ಬಂಧಿತರು. ಮಧ್ಯಾಹ್ನದ ಹೊತ್ತಿಗೆ ಮೆಗ್ಗಾನ್‌ ಆಸ್ಪತ್ರೆಯ ಪಾರ್ಕಿಂಗ್‌ ಸ್ಥಳದಲ್ಲಿ ಇಬ್ಬರು ಮಾರಕಾಸ್ತ್ರ ಪ್ರದರ್ಶಿಸಿ ಜನರಲ್ಲಿ ಆತಂಕ ಮೂಡಿಸಿದ್ದರು ಎಂದು ಆರೋಪಿಸಲಾಗಿದೆ. ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ದಾಳಿ ನಡೆಸಿ ಮಾರಕಾಸ್ತ್ರ ಸಹಿತ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ರಾತ್ರಿ ಪೂರ್ತಿ ಗುಡುಗು, ಮಳೆ ಅಬ್ಬರ, ಇವತ್ತೂ ಅಲರ್ಟ್‌ ಪ್ರಕಟ

Leave a Comment