ಶಿವಮೊಗ್ಗದಲ್ಲಿ ಪೊಲೀಸ್‌ ಅಧಿಕಾರಿಯ ಬೈಕ್‌ ನಾಪತ್ತೆ, ಎಲ್ಲಿ? ಆಗಿದ್ದೇನು?

ಶಿವಮೊಗ್ಗ: ಮನೆ ಮುಂದೆ ನಿಲ್ಲಿಸಿದ್ದ ಪೊಲೀಸ್‌ ಅಧಿಕಾರಿಯೊಬ್ಬರ ಬೈಕನ್ನೇ (Splendor Plus) ಕಳ್ಳರು ಕದ್ದೊಯ್ದಿದ್ದಾರೆ.  ಹೊಸ ಬೊಮ್ಮನಕಟ್ಟೆ, ಅಪೂರ್ವ ಕಾಲೇಜು ಬಳಿ ಮನೆ ಮುಂಭಾಗ ನಿಲ್ಲಿಸಿದ್ದ ಪೊಲೀಸ್‌ ಅಧಿಕಾರಿ ಯತೀಶ್‌  ಅವರ ಸ್ಪ್ಲೆಂಡರ್‌ ಪ್ಲಸ್‌ ಬೈಕ್‌ ಕಳುವಾಗಿದೆ.

ಇದನ್ನೂ ಓದಿ » ಮೆಗ್ಗಾನ್‌ ಆಸ್ಪತ್ರೆಯಿಂದ ಹೊರಬಂದ ಮೆಡಿಕಲ್‌ ವಿದ್ಯಾರ್ಥಿಗೆ ಕಾದಿತ್ತು ಶಾಕ್‌, ಆಗಿದ್ದೇನು?

ಯತೀಶ್‌ ಅವರು ರಾತ್ರಿ ಕರ್ತವ್ಯ ಮುಗಿಸಿ ಬಂದ ನಂತರ ಬೈಕ್ ಅನ್ನು ಮನೆಯ ಮುಂದೆ ನಿಲ್ಲಿಸಿದ್ದರು. ಮರುದಿನ ಬೆಳಗ್ಗೆ ನೋಡಿದಾಗ ಬೈಕ್ ನಾಪತ್ತೆಯಾಗಿತ್ತು. ಬೈಕ್‌ಗಾಗಿ ಎಲ್ಲೆಡೆ ಹುಡುಕಾಡಿದ್ದಾರೆ. ಬಳಿಕ ವಿನೋಬನಗರ ಪೊಲೀಸ್‌ ಠಾಣೆಗೆ ದೂರ ನೀಡಿದ್ದು, ತನಿಖೆ ನಡೆಯುತ್ತಿದೆ.

bike theft reference image

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment